IMD Weather Forecast: ಈ ಭಾಗಗಳಲ್ಲಿ ಆಗಸ್ಟ್ 7ರ ವರೆಗೆ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಿಗೆ ಮುಂಗಾರು ಆವರಿಸಿದ್ದು, ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ತಾಪಮಾನದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆಯಿದೆ.

ಒಂದೆಡೆ ಮುಂಗಾರು ಆದ್ರೆ, ಮತ್ತೊಂದೆಡೆ ಚಂಡಮಾರುತದ ಪರಿಚಲನೆ ಪರಿಣಾಮ ಹಿನ್ನೆಲೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಇದರ ಪರಿಣಾಮ ಪಶ್ಚಿಮ ಮತ್ತು ಉತ್ತರ ಭಾರತದ ಭಾಗಗಳ ರಾಜ್ಯಗಳ ಮೇಲೆ ಬೀರಲಿದೆ ಎಂದು ಎಚ್ಚರಿದೆ ಸಂದೇಶವನ್ನು ನೀಡಿದೆ. ಹಾಗಾದ್ರೆ ಎಲ್ಲಲ್ಲಿ ಎಲ್ಲಿವರೆಗೂ ಮಳೆ ಎನ್ನುವ ಮಾಹಿತಿಯನ್ನು ಕಳಗೆ ನೀಡಲಾಗಿದೆ ಕಣ್ಣಾಡಿಸಿ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 2 ರಿಂದ 7ರ ವರೆಗೆ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಗಸ್ಟ್ 2ರಿಂದ 4ರ ವರೆಗೆ ಅಸ್ಸಾಂ ಮತ್ತು ಮೇಘಾಲಯ ರಾಜ್ಯದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಮಧ್ಯ ಭಾರತದ ಹವಾಮಾನ: ಆಗಸ್ಟ್ 2 ರಿಂದ 7ರ ವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಆಗಸ್ಟ್ 2ರಿಂದ 5ರ ವರೆಗೆ ಬಿಹಾರ, ಆಗಸ್ಟ್ 2ರಂದು ಜಾರ್ಖಂಡ್ ಆಗಸ್ಟ್ 3-5ರ ವರೆಗೆ ಪಶ್ಚಿಮ ಮಧ್ಯಪ್ರದೇಶ, ಆಗಸ್ಟ್ 3-4ರ ವರೆಗೆ ಪೂರ್ವ ಮಧ್ಯಪ್ರದೇಶ, ಆಗಸ್ಟ್ 2ರಂದು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 4-6ರ ವರೆಗೆ ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 2-5ರ ವರೆಗೆ ಹಿಮಾಚಲ ಪ್ರದೇಶ, ಆಗಸ್ಟ್ 2-7ರ ವರೆಗೆ ಉತ್ತರಾಖಂಡ, ಆಗಸ್ಟ್ 2-5ರ ವರೆಗೆ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಆಗಸ್ಟ್ 3-7ರ ವರೆಗೆ ಪೂರ್ವ ರಾಜಸ್ಥಾನದಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 2-7ರ ವರೆಗೆ ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರ್ನಾಟಕದ ಕರವಾಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 5-7ರ ವರೆಗೆ ಮಳೆಯಾಗಲಿದ್ದು, ಇದೇ ವೇಳೆ ಕರಾವಳಿ ಆಂಧ್ರ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದೆ. ಆಗಸ್ಟ್ 2-7ರ ವರೆಗೆ ಲಕ್ಷದ್ವೀಪ, ತೆಲಂಗಾಣದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ. ವೇಗದಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಶ್ಚಿಮ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 2-7ರ ವರೆಗೆ ಮಹಾರಾಷ್ಟ್ರ, ಗುಜರಾತ್, ಗೋವಾ ಭಾಗಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ: ಆಗಸ್ಟ್ 4ರ ವರೆಗೂ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ತಾಪಮಾನದಲ್ಲಿ ಏರಿಳಿತ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹಾವಾಮಾನ ಇಲಾಖೆ ತಿಳಿಸಿದೆ.
ಗುಡುಗು ಸಹಿತ ತುಂಬಾ ಹಗುರ












Click it and Unblock the Notifications