IMD Weather Forecast: ಈ ಭಾಗಗಳಲ್ಲಿ ಜುಲೈ 24ರ ವರೆಗೆ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಹಾಗೆಯೇ ಈ ಭಾಗಗಳಲ್ಲಿ ಜುಲೈ 24ರ ವರೆಗೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದಕ್ಷಿಣ ಭಾರತದಾದ್ಯಂತ ಈಗಾಗಲೇ ಭಾರೀ ಮಳೆ ಮುಂದುವರೆದಿದೆ. ಅದರಲ್ಲೂ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಈ ಭಾಗಗಳು ಸೇರಿದಂತೆ ದೇಶಹ ಹಲವೆಡೆ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

IMD Weather Forecast Heavy rain in These states Till July 24

ಪ್ರಯಾಣಿಕರಿ ಪ್ರಮುಖ ಸೂಚನೆ: ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇಶದ ಹಲವೆಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಘಟನೆ ನಡೆದಿವೆ. ಮುಂದಿನ ದಿನಗಳಲ್ಲಿಯೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಜನರು ಹವಾಮಾನ ನೋಡಿಕೊಂಡು ಪ್ರಯಾಣ ಮುಂದುವರೆಸಬೇಕು ಎಂದು ಸೂಚನೆ ನೀಡಿದೆ. ಈ ವೇಳೆಯೇ ಹೆಚ್ಚು ಜನರು ಪ್ರವಾಸ ಕೈಗೊಳ್ಳುತ್ತಾರೆ. ಆದ್ದರಿಂದ ಅವರ ಸುರಕ್ಷತೆ ದೃಷ್ಟಿಯಿಂದ ಹವಾಮಾನ ಇಲಾಖೆ ಈ ಸೂಚನೆ ನೀಡಿದೆ.

ಎಲ್ಲೆಲ್ಲಿ ಹೆಚ್ಚು ಮಳೆ?: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣದ ಕರಾವಳಿ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಸಹಿರ ರಣಭೀಕರ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಜುಲೈ 21-23ರ ವರೆಗೆ ಮಧ್ಯಪ್ರದೇಶ, ಜುಲೈ 22-24ರ ವರೆಗೆ ಒಡಿಶಾ ಮತ್ತು ಛತ್ತೀಸ್‌ಗಢ, ಜುಲೈ 20-22ರ ವರೆಗೆ ಬಿಹಾರ ಮತ್ತು ಜುಲೈ 21ರ ವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

ಜುಲೈ 22 ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 19ರಂದು ರಾಜಸ್ಥಾನ, 20 ಮತ್ತು 21ರಂದು ಉತ್ತರಾಖಂಡ, ಜುಲೈ 22ರ ವರೆಗೆ ಪಶ್ಚಿಮ ಉತ್ತರ ಪ್ರದೇಶ, ಜುಲೈ 21ರಂದು ಪೂರ್ವ ಉತ್ತರ ಪ್ರದೇಶ, ಜುಲೈ 20 ರಿಂದ 23ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಜುಲೈ 20 ರಿಂದ 22 ಪಂಜಾಬ್ ಮತ್ತು ಹರಿಯಾಣದಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಭಾರತೀಯ ಹವಾಮಾನ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ, ಮಳೆಯಿಂದ ಸಂಭವಿಸುವ ಪ್ರವಾಹ ಮತ್ತು ಸಂಚಾರ ಅಡಚಣೆಗಳಿಗೆ ನಾಗರಿಕರು ಸಿದ್ಧರಾಗಿರುವಂತೆ ಸೂಚನೆ ನೀಡಿದೆ. ಈಗಾಗಲೇ ರಣಭೀಕರ ಮಳೆಯಿಂದ ಜನರ ಜೀವನ ನೀರಿನಲ್ಲಿ ಮುಳುಗಿದ ಘಟನೆಗಳು ನಡೆದಿವೆ. ಆದ್ದರಿಂದ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+