IMD Weather Forecast: ಈ ಭಾಗಗಳಲ್ಲಿ ಜುಲೈ 25ರ ವರೆಗೆ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಹಾಗೆಯೇ ಇದೀಗ ಜುಲೈ 25ರ ವರೆಗೆ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂದಿನ ಒಂದು ವಾರ ದೇಶದ ಹಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆ (21 ಸೆಂ.ಮೀ) ಬೀಳುವ ಮುಂನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಹಲವು ರಾಜ್ಯಗಳಿಕೆ ರೆಡ್ ಅಲರ್ಟ್ ಘೋಷಣೆ ಮಾಡಿದರೆ, ಇನ್ನೂ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ.

ಇಂದು (ಜುಲೈ 20) ನೈಋತ್ಯ ಹಾಗೂ ಆಗ್ನೇಯ ರಾಜಸ್ಥಾನದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಜುಲೈ 20ರಿಂದ 24ರವರೆಗೆ ಇದೇ ರೀತಿಯ ವಾತವಾರಣ ಮುಂದುವರೆಯಲಿದೆ. ಇನ್ನು ವಿಶೇಷವಾಗಿ ಉತ್ತರಾಖಂಡಕ್ಕೆ ಭಾರೀ ಮಳೆ ಹಿನ್ನೆಲೆ ಜುಲೈ 20 ರಿಂದ 22ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಪಶ್ಚಿವ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 25ರ ವರೆಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳು ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ: ಕೇರಳದಲ್ಲಿ ಜುಲೈ 20ರಂದು ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಇಂದಿನಿಂದ ಮುಂದಿನ ಹಲವು ದಿನಗಳ ಕಾಲ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 20 ರಿಂದ 25ರ ವರೆಗೆ ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಈಶಾನ್ಯ ಭಾರತದಲ್ಲಿ ವಾರವಿಡೀ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಭಾಗಗಳಲ್ಲಿ ಜನರು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಸಂದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಪ್ರವಾಹ, ಭೂಕುಸಿತದಂತ ಘಟನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ದೇಶದ ಹಕವೆಡೆ ದೊಡ್ಡ ದೊಡ್ಡ ಅವಾಂತರಗಳು ಸಂಭವಿಸಿರುವ ಉದಾಹರಣೆಗಳಿವೆ.
ಈ ಬಾರಿ ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟು ಕರ್ನಾಟಕಕ್ಕೂ ವಿಸ್ತರಣೆ ಆಯಿತು. ಬಳಿಕ ದೇಶಾದ್ಯಂತ ಆವರಿಸಿಬಿಟ್ಟಿತು. ಪರಿಣಾಮ ಅಬ್ಬರಿಸಿ ಬೊಬ್ಬೆರೆದ ಮಳೆರಾಯನ ಆರ್ಭಟದಿಂದ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ತುಂಬಿ ಹರಿದು ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ.












Click it and Unblock the Notifications