IMD Weather Forecast: ಚಂಡಮಾರುತದ ಪರಿಚಲನೆ ಪರಿಣಾಮ ಈ ಭಾಗಗಳಲ್ಲಿ ಜುಲೈ 29ರ ವರೆಗೆ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಿಗೆ ಮುಂಗಾರು ಆವರಿಸಿಬಿಟ್ಟಿದೆ. ಜೊತೆಗೆ ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ಹಲವೆಡೆ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕೈದು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಪರಿಣಾಮ ದೇಶದ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಇನ್ನೂ ಕೆಲವೆಡೆ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy rain in These states Till July 29

ಚಂಡಮಾರುತ ಪರಿಣಾಮ ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಕೊಂಕಣ, ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳು, ವಿದರ್ಭ ಮತ್ತು ಪಶ್ಚಿಮ ಬಂಗಾಳದ ಗಂಗಾ ನದಿ ತೀರ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದರಲ್ಲೂ ಮುಂದಿನ 4ರಿಂದ 5 ದಿನಗಳ ಕಾಲ ಮಧ್ಯ ಮತ್ತು ಪೂರ್ವ ಭಾರತ, ಪಶ್ಚಿಮ ಕರಾವಳಿ ಮತ್ತು ಪಕ್ಕದ ಘಾಟ್ ಪ್ರದೇಶಗಳಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ. ಇದರಿಂದ ಅನೇಕ ರಾಜ್ಯಗಳಲ್ಲಿ ವ್ಯಾಪಕವಾಗು ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪೂರ್ವ, ಮಧ್ಯ ಭಾರತದದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 25ರಂದು ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 25 - 26ರ ವರೆಗೆ ಛತ್ತೀಸ್‌ಗಢ, ಜುಲೈ 26-27ರ ವರೆಗೆ ಮಧ್ಯಪ್ರದೇಶ, ಜುಲೈ 25ರಂದು ವಿದರ್ಭ, ಜುಲೈ 25ರಂದು ಪಶ್ಚಿಮ ಬಂಗಾಳದ ಪ್ರತ್ಯೇ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 25-28ರ ವರಗೆ ಜಾರ್ಖಂಡ್, ಜುಲೈ 25-27ರ ವರೆಗೆ ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜುಲೈ 24 ಮತ್ತು 25ರಂದು ಬಿಹಾರದಲ್ಲಿ ಭಾರೀ ಮಳೆಯಾಗಲಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 25ರಂದು ಕರಾವಳಿ ಕರ್ನಾಟಕ, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ಜುಲೈ 25-29ರ ವರೆಗೆ ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ಜುಲೈ 25-27ರ ವರೆಗೆ ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಮುಂದಿನ 5 ದಿನಗಳ ಕಾಲ ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 25ರಂದು ಕೊಂಕಣ ಮತ್ತು ಗೋವಾ, ಜುಲೈ 25-30ರ ವರೆಗೆ ಮಧ್ಯ ಮಹಾರಾಷ್ಟ್ರ, ಜುಲೈ 25-26ರ ವರೆಗೆ ಮಹಾರಾಷ್ಟ್ರದ ಮರಾಠವಾಡ, ಜುಲೈ 25-29ರ ವರೆಗೆ ಗುಜರಾತ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 27-28ರ ವರೆಗೆ ಪೂರ್ವ ರಾಜಸ್ಥಾನ, ಪಂಜಾಬ್, ಹರಿಯಾಣ, ಜುಲೈ 28ರಂದು ಪಶ್ಚಿಮ ಉತ್ತರ ಪ್ರದೇಶ, ಜುಲೈ 29-30ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಜುಲೈ 26-30ರ ವರೆಗೆ ಹಿಮಾಚಲ ಪ್ರದೇಶ, ಜುಲೈ 25-30ರ ವರೆಗೆ ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಜುಲೈ 27-28ರ ವರೆಗೆ

ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 26ರಂದು ಅರುಣಾಚಲ ಪ್ರದೇಶ, ಮಿಜೋರಾಂ ಮತ್ತು ತ್ರಿಪುರ, ಜುಲೈ 25-28ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಷ್ಟ್ರ ರಾಜಧಾನಿ ನವದೆಹಲಿ ಹವಾಮಾನ: ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್‌ ಪ್ರದೇಶಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಭಾರೀ ಮಳೆಯಾಗುವಂತಹ ಪ್ರದೇಶಗಳಲ್ಲಿನ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆಯೂ ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+