IMD Weather Forecast: ಈ ಭಾಗಗಳಲ್ಲಿ ಅಕ್ಟೋಬರ್ 1ರ ವರೆಗೂ ರಣಭೀಕರ ಮಳೆ ಸುರಿಯುವ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನು ಅಕ್ಟೋಬರ್ 1ರ ವರೆಗೆ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಭಾರೀ ಮಳೆಯಿಂದ ಹಲವೆಡೆ ಜಲಪ್ರಳಯದಿಂದ ಜನರು ತತ್ತರಿಸಿ ಹೋಗಿದ್ದಾರೆ. ಇನ್ನೂ ಇದೀಗ ಮತ್ತೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಅನಾಹುತಗಳು ಸಂಭವಿಸುತ್ತವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

IMD Weather Forecast Heavy rain in These states Till October 1

ಈಗಾಗಲೇ ದೇಶದಲ್ಲಿ ಮುಂಗಾರು ಮಳೆ ತಗ್ಗಿದೆ. ಆದರೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ತೆಲಂಗಾಣ, ಒಡಿಶಾ, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದ, ಮಧ್ಯ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಸೆಪ್ಟೆಂಬರ್ 26-27ರ ವರೆಗೆ ಒಡಿಶಾ, ಛತ್ತೀಸ್‌ಗಢ ಸೆಪ್ಟೆಂಬರ್ 26-29, ಕೊಂಕಣ ಮತ್ತು ಗೋವಾ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 1ರ ವರೆಗೆ, ಮಧ್ಯ ಮಹಾರಾಷ್ಟ್ರ ಸೆಪ್ಟೆಂಬರ್ 27-29, ಮರಾಠವಾಡ ಸೆಪ್ಟೆಂಬರ್ 26-28, ಗುಜರಾತ್ ಸೆಪ್ಟೆಂಬರ್ 27-30, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಸೆಪ್ಟೆಂಬರ್ 28-30ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ಸಾಂ ಮತ್ತು ಮೇಘಾಲಯ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರ ವರೆಗೆ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 1ರ ವರೆಗೆ, ಅರುಣಾಚಲ ಪ್ರದೇಶ ಅಕ್ಟೋಬರ್ 1ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತೆಲಂಗಾಣ ಸೆಪ್ಟೆಂಬರ್ 26, ಕರಾವಳಿ ಆಂಧ್ರ ಮತ್ತು ಯಾನಂ ಸೆಪ್ಟೆಂಬರ್ 26, ಕೇರಳ ಮತ್ತು ತಮಿಳುನಾಡಿನಲ್ಲಿ ಸೆಪ್ಟೆಂಬರ್ 26-27ರ ವರೆಗೆ, ಕರ್ನಾಟಕದ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 26ರಿಂದ 29ರ ವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನ ವಿವರ: ಹವಾಮಾನ ಇಲಾಖೆ ಪ್ರಕಾರ, ನವದೆಹಲಿ-ಎನ್‌ಸಿಆರ್ ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದೆಹಲಿಯಲ್ಲಿ ಇಂದು ಗರಿಷ್ಠ ತಾಪಮಾನ 33-37°C ಮತ್ತು ಕನಿಷ್ಠ ತಾಪಾಮಾನ 23-26°C ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ವಾತಾವರಣ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಇನ್ನೂ ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ, ಇನ್ನೂ ಏನೆಲ್ಲಾ ಕಾದಿದೆಯೋ ಎನ್ನುವ ಆತಂಕದಲ್ಲಿ ಜನರು ಜೀವನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+