IMD Weather Forecast: ಈ ಭಾಗಗಳಲ್ಲಿ ಸೆಪ್ಟೆಂಬರ್ 10ರ ವರೆಗೆ ಭಾರೀ ಮಳೆ: ಐಎಂಡಿಯಿಂದ ಯೆಲ್ಲೋ ಅಲರ್ಟ್ ಘೋಷಣೆ!

IMD Weather Forecast: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮಳೆ ಅಬ್ಬರ ಇಳಿದಿದೆ. ಆದರೆ, ಇದೇ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲೂ ಸಹ ಈ ವಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಮಳೆ - ಹವಾಮಾನ ಮುನ್ಸೂಚನೆ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಭಾರತದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದೆ. ಸೆಪ್ಟೆಂಬರ್ 8ರ ಮಂಗಳವಾರ ಉತ್ತರ ಮತ್ತು ಪೂರ್ವ ಭಾರತದ ವಿವಿಧ ಪ್ರದೇಶಗಳಲ್ಲಿ ಸಕ್ರಿಯ ಮಾನ್ಸೂನ್ ಚುರುಕುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಭಾರತದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶದ ಮಧ್ಯ ಭಾಗಗಳಲ್ಲಿ ಕಡಿಮೆ ಒತ್ತಡದ ಪ್ರದೇಶವಿದ್ದು, ಚಂಡಮಾರುತ ಪ್ರಸರಣದ ಪ್ರಭಾವ ಹಾಗೂ ದೇಶಾದ್ಯಂತ ಹವಾಮಾನದ ಮೇಲೆ ಪ್ರಭಾವ ಬೀರುವ ಇತರ ಮಳೆಗೆ ಪೂರಕ ವಾತಾವರಣವು ನಿರ್ಮಾಣವಾಗಿದ್ದು, ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

IMD Weather Forecast Heavy Rain Likely in These Areas Till September 10 Yellow Alert Issued

ಮುಂದಿನ ಮೂರು ದಿನಗಳ ವರೆಗೆ ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಭಾರತದ ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಂಗಳವಾರ ಪ್ರತ್ಯೇಕವಾಗಿ ಹಾಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರದಂದು ಭಾರೀ ಮಳೆ ಇರಲಿದೆ. ಇನ್ನು ನೈಋತ್ಯ ಉತ್ತರ ಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿ ಈ ಹಿಂದೆ ಇದ್ದ ಕಡಿಮೆ ಒತ್ತಡದ ಪ್ರದೇಶವು ಈಗ ರಾಜ್ಯದ ಮಧ್ಯ ಭಾಗಗಳತ್ತ ಸಾಗಿದೆ ಎಂದು ಹೇಳಲಾಗಿದೆ.

ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಒಂದು ತಗ್ಗು ಪ್ರದೇಶ, ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಎರಡು ಪಶ್ಚಿಮ ಅಡಚಣೆಗಳು ಮತ್ತು ಈಶಾನ್ಯ ಬಿಹಾರ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಚಂಡಮಾರುತದ ಪರಿಚಲನೆ ಸೇರಿದಂತೆ ಹಲವಾರು ಇತರ ಹವಾಮಾನ ವ್ಯವಸ್ಥೆಯ ಕಾರಣಕ್ಕಾಗಿ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

IMD Weather Forecast: ಈ ರಾಜ್ಯಗಳಲ್ಲಿ ಭಾರೀ ಮಳೆ

ಇನ್ನು ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗುತ್ತಿದೆ. ಆದರೆ, ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಭಾರತದ ಈಶಾನ್ಯ ಭಾಗದಲ್ಲಿ ಭಾರೀ ಮಳೆ ಆಗುತ್ತಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 9ರಂದು ಬಿಹಾರ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳು ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

IMD Weather Forecast: ದಕ್ಷಿಣ ಭಾರತದಲ್ಲಿ ಹವಾಮಾನ ಹೇಗಿದೆ ?

ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದ್ದರೆ, ದಕ್ಷಿಣ ಭಾರತದಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಮಂಗಳವಾರ ಕೇರಳದಲ್ಲಿ ಬಿಸಿಲ ಝಳ ಹೆಚ್ಚಾಗಿರಲಿದೆ. ತೆಲಂಗಾಣದ ಮೇಲೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದಲ್ಲೂ ಬಿಸಿಲು ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+