Imd Weather Forecast: ದೇಶದ ಈ 6 ರಾಜ್ಯಗಳಲ್ಲಿ ಭಾರೀ ಮಳೆ, ಈ ಭಾಗದಲ್ಲಿ ಪ್ರವಾಹ ಭೀತಿ!
Imd Weather Forecast: ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಸರಣ ಹೆಚ್ಚಾಗುತ್ತಿದ್ದು. ಕರ್ನಾಟಕವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತ ಪಶ್ಚಿಮ ಮತ್ತು ದಕ್ಷಿಣ ಭಾಗದ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಭಾರತದ ಪ್ರಮುಖ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಚಂಡಮಾರುತದ ಪ್ರಸರಣ ಹೆಚ್ಚಾಗುತ್ತಿರುವುದರಿಂದ ಮುಂದಿನ 10 ದಿನಗಳ ವರೆಗೆ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ, ತಮಿಳುನಾಡು,ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿದಂತೆ ವಿವಿಧ ಪ್ರಮುಖ ರಾಜ್ಯಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ವಿವಿಧ ಪ್ರದೇಶದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೆಲವು ಭಾಗದಲ್ಲಿ ಪ್ರವಾಹ ಭೀತಿ ಸಹ ಶುರುವಾಗಿದೆ.

ಆಗ್ನೇಯ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುತ್ತಿರುವುದರಿಂದ ದೇಶದ ಹಲವು ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮತ್ತು ತೆಲಂಗಾಣ ಸೇರಿದಂತೆ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಇನ್ನಷ್ಟು ತೀವ್ರವಾಗಿ ಮಳೆಯಾಗುವ ಸಾಧ್ಯತೆ ಇದೆ. ಈ ರಾಜ್ಯಗಳ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರ ಪ್ರದೇಶಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಐಎಂಡಿ ವರದಿಯ ಪ್ರಕಾರ, ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಚಂಡಮಾರುತದ ಪ್ರಸರಣವು ಹೆಚ್ಚಾಗುತ್ತಿದ್ದು, ಪ್ರಸ್ತುತ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಷ್ಣವಲಯದ ಮಧ್ಯದ ಮಟ್ಟಗಳವರೆ ತಲುಪಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ಕೊಂಕಣ, ಗೋವಾ ಹಾಗೂ ಮಹಾರಾಷ್ಟ್ರ ಭಾಗದಲ್ಲಿ, ಗುಜರಾತ್ ಪ್ರದೇಶ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಇರಲಿದೆ.
ಅಕ್ಟೋಬರ್ 24 ರಂದು 26ರ ವರೆಗೆ ತಮಿಳುನಾಡಿನಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ 27ರಿಂದ 29 ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 25 ರವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಇರಲಿದೆ ಎಂದು ಐಎಂಡಿ ರಿಪೋರ್ಟ್ ಉಲ್ಲೇಖಿಸಿದೆ.
ಅಕ್ಟೋಬರ್ 25ರ 29 ವರೆಗೆ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ಯಾಣಂ ಹಾಗೂ ರಾಯಲಸೀಮಾ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿಯ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ಇನ್ನು ಕರ್ನಾಟಕ ಸೇರಿದಂತೆ ತಮಿಳುನಾಡು - ಆಂಧ್ರಪ್ರದೇಶ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಭಾಗದ ಕರಾವಳಿ ಪ್ರದೇಶದಲ್ಲಿ ಅಲರ್ಟ್ ನೀಡಲಾಗಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications