IMD Weather Forecast: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಈ ಭಾಗಗಳಲ್ಲಿ ಮಳೆ ಆರ್ಭಟ: ಐಎಂಡಿ ಮುನ್ಸೂಚನೆ
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟವು ಮುಂದುವರಿದೆ. ತಮಿಳುನಾಡು ಕರಾವಳಿಯ ಮನ್ನಾರ್ ಕೊಲ್ಲಿಯಿಂದ ನೈಋತ್ಯ ಬಂಗಾಳ ಕೊಲ್ಲಿಯವರೆಗೆ ಇದ್ದ, ಪೂರ್ವ ದಿಕ್ಕಿನ ಗಾಳಿಗಳಲ್ಲಿನ "ಟ್ರಫ್' (trough - ವಾಯುಭಾರ ಕುಸಿತದಂತಹ ವಾತಾವರಣದ ರಚನೆ), ಇದೀಗ ಕೊಮೊರಿನ್ ಪ್ರದೇಶದಿಂದ ತಮಿಳುನಾಡು ಮತ್ತು ಕೇರಳದ ಮೂಲಕ ದಕ್ಷಿಣ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿದ. ಇದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಲೋಮೀಟರ್ ಎತ್ತರದವರೆಗೆ ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಲಕ್ಷದ್ವೀಪ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಕಂಡುಬರುತ್ತಿದ್ದ ಮೇಲೆ ವಾಯು ಚಕ್ರವಾತ ಪರಿಚಲನೆಯು (upper air cyclonic circulation) ಈಗ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ದೆಹಲಿಯಿಂದ ನೈಋತ್ಯ ಮಾನ್ಸೂನ್ ಹಿಂದೆ ಸರಿಯುತ್ತಿದ್ದಂತೆ, ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಬದಲಾವಣೆ ಆಗಿದೆ. ದೆಹಲಿಯಲ್ಲಿ ನವೆಂಬರ್ 27ರ ಶುಕ್ರವಾರ ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ. ಇನ್ನು ಆದರೆ ಗರಿಷ್ಠ ತಾಪಮಾನವು ಸುಮಾರು 34 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ದಿನವಿಡೀ ಆಕಾಶವು ಭಾಗಶಃ ಮೋಡ ಕವಿದಿರಬಹುದು, ಆದರೆ ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದೇಶದ ವಿವಿಧ ಭಾಗಗಳಲ್ಲಿ ಶನಿವಾರದಿಂದ ಹವಾಮಾನ ಪರಿಸ್ಥಿತಿಗಳು ಬದಲಾಗಬಹುದು. ಶನಿವಾರ ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಭಾರತದ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ.
ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತವು ಕ್ರಮೇಣ ದುರ್ಬಲಗೊಳ್ಳುತ್ತಿದೆ. ಮಧ್ಯ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಮೇಲೆ ಈ ವ್ಯವಸ್ಥೆಯು ಪ್ರಭಾವ ಬೀರುವ ನಿರೀಕ್ಷೆಯಿದೆ. ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಭಾರೀ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ ಮತ್ತು ಮೇಘಾಲಯ, ಬಿಹಾರ, ಕರಾವಳಿ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಕೇರಳ, ತೆಲಂಗಾಣ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಉತ್ತರಾಖಂಡ್, ದೆಹಲಿ, ಹರಿಯಾಣ ಮತ್ತು ಚಂಡೀಗಢದಲ್ಲಿ ಶುಕ್ರವಾರವೂ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿ ವರದಿ ಉಲ್ಲೇಖಿಸಿದೆ. ಆದಾಗ್ಯೂ, ಹತ್ತಿರದ ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.





Click it and Unblock the Notifications
