IMD Weather Forecast: ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಮಾಯವಾಗಿದ್ದು, ಬಿರು ಬಿಸಿಲು ಮುಮದುವರೆದಿದೆ. ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದು (ಮಾರ್ಚ್‌ 1) ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ನಿನ್ನೆ (ಫೆಬ್ರವರಿ 28) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಹಲವೆಡೆ ತುಂತುರು ಮಳೆಯಾಗಿದೆ. ಹಾಗೆಯೇ ಇಂದು (ಮಾರ್ಚ್‌ 1, 2025) ಬೆಳ್ಳಂಬೆಳಗ್ಗೆ ಕೂಡ ಇದೇ ರೀತಿ ಮಳೆಯಾಗಿದೆ. ಇದೀಗ ಮೋಡ ಕವಿದ ವಾತಾವರಣ ಇದ್ದು, ಮತ್ತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy Rain with Thunderstorm Expected in These states In few moments

ನವದೆಹಲಿಯ ಅಲ್ಲದೆ, ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಮಳೆಯಾಗಿದೆ. ಇದೀಗ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಿಮಪಾತದ ವಾತಾವರಣ ನಿರ್ಮಾಣವಾಗಿದೆ. ಇಂದು (ಮಾರ್ಚ್‌ 1) ನವದೆಹಲಿಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂಡನ್ ವಾಯುಪಡೆ ನಿಲ್ದಾಣ, ಬಹದ್ದೂರ್‌ಗಢ, ಗಾಜಿಯಾಬಾದ್, ಇಂದಿರಾಪುರಂ, ಛಪ್ರೌಲಾ, ನೋಯ್ಡಾ, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದೆ. ಹರಿಯಾಣದ ಅಸ್ಸಂಧ್, ಸಫಿಡಾನ್, ಗನ್ನೌರ್, ಸೋನಿಪತ್, ಖಾರ್ಖೋಡಾ, ಸೋಹಾನಾ, ರೇವಾರಿ, ಪಲ್ವಾಲ್, ಬವಾಲ್ ಮತ್ತು ನುಹ್ ಪ್ರದೇಶಗಳಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶದ ಹಲವೆಡೆ, ರಾಜಸ್ಥಾನ ಹರಿಯಾಣದಲ್ಲೂ ಕೂಡ ಮುಂದಿನ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕಳೆದ ಎರದು ದಿನಗಳಿಂದ ಮಳೆ ಸುರಿದ ಹಿನ್ನೆಲೆ ರಾಷ್ಟ್ರ ರಾಜಧಾನಿ ನವದೆಹಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿದೆ. ಫೆಬ್ರವರಿ 27ರಂದು ಸಂಜೆ 4 ಗಂಟೆಯವರೆಗೆ ದೆಹಲಿಯಲ್ಲಿ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 121ಕ್ಕೆ ಇಳಿದಿತ್ತು, ಫೆಬ್ರವರಿ 28ರಂದು ಅದು 114ಕ್ಕೆ ಇಳಿಕೆಯಾಗಿದೆ. ಅಲ್ಲದೆ ತಂಪಾದ ವಾತಾವರಣ ಇದೆ ಎಂದು ತಿಳಿದುಬಂದಿದೆ.

ಈಗಾಗಲೇ ಕಳೆದ ವರ್ಷ ಅಂದರೆ, 2024ರಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಪ್ರವಾಹದಂತಹ ವಾತಾವರಣ ಸೃಷ್ಟಿಯಾಗಿ ಅವಾಂತರಗಳೇ ಸೃಷ್ಟಿಯಾಗಿದ್ದವು. ಮತ್ತೊಂದೆಡೆ ದಕ್ಷಿಣ ಭಾರತದ ಕೇರಳದ ವಯನಾಡಿನಲ್ಲಿ ಪ್ರವಾಹ ಬಂದು ಗುಡ್ಡ ಕುಸಿದು ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು.

ಮತ್ತೊಂದೆಡೆ ನೋಡೋದಾದ್ರೆ, ಕಳೆದ ವರ್ಷ ಸುರಿದ ಮುಂಗಾರು ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಯಾಕಂದ್ರೆ ಅದರ ಹಿಂದಿನ ವರ್ಷ ಅಂದ್ರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಭಾಗಗಳಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯ ಶಾಖಕ್ಕೆ ಸುಟ್ಟು ಹೋಗಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+