IMD Weather Forecast: ಈ ಭಾಗಗಳಲ್ಲಿ ಮುಂದಿನ 2 ದಿನ ಬಿರುಗಾಳಿ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಭಾರತದಲ್ಲಿ ತಾಪಮಾನ ಏರಿಕೆ ಆಗಲಿದ್ದು, ಮಾರ್ಚ್ ಅಂತ್ಯದ ವೇಳೆಗೆ ದೆಹಲಿ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಮತ್ತೊಂದೆಡೆ ಈ ವೇಳೆ ರಾಜಸ್ಥಾನ ಮತ್ತು ಬಿಹಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಬಿಸಿಲಿನ ತಾಪದಿಂದ ಆಗುವ ಅನಾಹುತಗಳಿಂದ ತಪ್ಪಿಸಿಕೊಳ್ಳಲು ಜನರಿಗೆ ಕೆಲವೊಂದು ಸಲಹೆಗಳನ್ನು ಅಧಿಕಾರಿಗಳು ನೀಡಿದ್ದಾರೆ.

IMD Weather Forecast Heavy Rainfall Forecast for Next 2 days in These states from March 21

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಮಾರ್ಚ್ ಅಂತ್ಯದ ವೇಳೆಗೆ 40°C ವರೆಗೆ ತಲುಪಲಿದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ. ಅಲ್ಲದೆ, ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಹಿಮಪಾತ ಮುಂದುವರಿಯಲಿದೆ ಅಂತಲೂ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ಮುಂದಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ತಾಪಾಮನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಇಂದು (ಮಾರ್ಚ್‌ 21) ಗರಿಷ್ಠ ತಾಪಮಾನ ಸುಮಾರು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಆದರೆ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಲಿದೆ ಎಂದು ತಿಳಿಸಿತ್ತು. ಇನ್ನು ಮಾರ್ಚ್ 25ರ ವೇಳೆಗೆ ಹಗಲಿಮ ವೇಳೆ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಮತ್ತು ರಾತ್ರಿ ವೇಳೆ 18 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಲೂಬಹುದು. ಅಲ್ಲದೆ ದೆಹಲಿಯ ಗಾಳಿಯ ಗುಣಮಟ್ಟ ಇನ್ನೂ ತುಂಬಾ ಸುಧಾರಣೆಯಾಗಬೇಕಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಮುಂದಿನ ಎರಡು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ದೆಹಲಿ, ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮತ್ತೊಂದೆಡೆ ಬಹುತೇಕ ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಲೇ ಇದೆ. ಆದ್ದರಿಂದ ಇದರಿಂದ ಆಗುವ ಅನಾಹುತಗಳಿಂದ ತಪ್ಪಿಸಿಕೊಳ್ಳಲು ತಜ್ಞರು ಜನರಿಗೆ ಕೆಲವೊಂದು ಸಮಹೆಗಳನ್ನು ನೀಡಿದ್ದಾರೆ.

ಅನಾಹುತದಿಂದ ತಪ್ಪಿಸಿಕೊಳ್ಳಲು ಸಲಹೆಗಳು

* ಬೆಳಿಗ್ಗೆ 11ರಿಂದ ಸಂಜೆ 4 ರವರೆಗೆ ಹೊರಗೆ ಹೋಗಬೇಡಿ.
* ನೀರಿನಂಶವನ್ನು ಕಾಪಾಡಿಕೊಳ್ಳಲು ಸಾಕಷ್ಟು ನೀರು ಕುಡಿಯಿರಿ.
* ಹಗುರವಾದ, ಉಸಿರಾಡುವ ಬಟ್ಟೆಗಳನ್ನು ಧರಿಸಿ ಮತ್ತು ಸನ್‌ಸ್ಕ್ರೀನ್ ಬಳಸಿ.
* ಫ್ಯಾನ್‌, ಪರದೆಗಳು ಅಥವಾ ಹವಾನಿಯಂತ್ರಣವನ್ನು ಬಳಸುವ ಮೂಲಕ ನಿಮ್ಮ ಮನೆಯನ್ನು ತಂಪಾಗಿಡಿ.
* ಮಕ್ಕಳು, ವೃದ್ಧರು ಮತ್ತು ಆರೋಗ್ಯ ಸಮಸ್ಯೆಗಳು ಇರುವವರಿಗೆ ಹೆಚ್ಚುವರಿ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+