IMD Weather Forecast: ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ 24 ಗಂಟೆಗಳಲ್ಲಿ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹಾಗೆಯೇ ಮುಂಬರುವ ದಿನಗಳಲ್ಲಿ ಕೆಲವು ರಾಜ್ಯಗಳಲ್ಲು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಮಾರ್ಚ್ 24) ಸಹ ಒಡಿಶಾದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಜೊತೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 24 ರಿಂದ 26ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 28 ಮತ್ತು 29ರಂದು ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಾರ್ಚ್ 24 ರಿಂದ 28ರ ವರೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಅದರ ನೆರೆಯ ಪ್ರದೇಶಗಳಾದ ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರ್‌ಬಾದ್‌ನಲ್ಲಿ ಪ್ರತ್ಯೇಕವಾಗು ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡ್ಮೂರು ದಿನಗಳವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮಾರ್ಚ್ 25ರ ವರೆಗೆ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ತಾಪಮಾನದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ.
ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ದೇಶದ ಯಾವುದೇ ಭಾಗದಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವುದಿಲ್ಲ. ಮಾರ್ಚ್ 22 ಮತ್ತು 25ರ ನಡುವೆ ಗುಜರಾತ್‌ನ ಕೆಲವು ಕರಾವಳಿ ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆಯಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಪ್ರಮುಖ ನದಿ, ಜಲಾಶಯಗಳು ತುಂಬಿದ ಹಿನ್ನೆಲೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ಬಾರಿಯೂ ಕೂಡ ಮುಂಗಾರು ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications