IMD Weather Forecast: 5-6 ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

IMD Weather Forecast: ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಪರಿಣಾಮ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5-6 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶದ ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಗುಡುಗು, ಮಿಂಚು ಸಹಿತ ಮಳೆಯಾದ್ರೆ, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೇ ಕೆಲವೆಡೇ ಮಾತ್ರ ತಾಪಮಾನ ಪ್ರಮಾಣದಲ್ಲಿ ಏರಿಕೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

IMD Weather Forecast Heavy rainfall forecast for next 5-6 days in These states from May 19

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಗೋವಾ ಮತ್ತು ಕೇರಳ ತಮಿಳುನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮೇ 20-22ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಮೇ 19-20ರ ವರೆಗೆ ರಾಯಲಸೀಮಾ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಮೇ 19ರಿಂದ 24ರ ವರೆಗೆ ಕೇರಳ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕ, ಮೇ 22ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಇಲ್ಲಿನ ಇನ್ನೂ ಕೆಲವು ಭಾಗಗಳಲ್ಲಿ ಮಾತ್ರ ಗಂಟೆಗೆ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 38-40 °C, ಕನಿಷ್ಠ ತಾಪಮಾನವು 27-29 °C ವರೆಗೂ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5-6 ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ 30-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಮೇ 19ರಂದು ತ್ರಿಪುರ ಮತ್ತು ನಾಗಾಲ್ಯಾಂಡ್‌, 24ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಮೇ 20ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಉತ್ತರ ಭಾರತದ ಹವಾಮಾನದ ವಿವರ: ಮೇ 19 ಮತ್ತು 20ರಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಎರಡು ದಿನ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ತಪಮಾನ ಹೆಚ್ಚಳ?: ಮೇ 19ರಿಂದ ಮೇ 22ರ ವರೆಗೆ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+