IMD Weather Forecast: ಈ ಭಾಗಗಳಲ್ಲಿ ಮುಂದಿನ 5 ದಿನ ಬಿರುಗಾಳಿ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಅಂದರೆ ಮಾರ್ಚ್‌ 20ರಿಂದ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಇದೀಗ ದೇಶದ ಬಹುತೇಕ ಭಾಗಗಳಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ದಾಖಲಾಗುತ್ತಿದೆ. ಆದ್ರೆ, ಮುಂದಿನ 4-5 ದಿನಗಳಲ್ಲಿ ದೇಶದ ಯಾವುದೇ ಭಾಗಗಳಲ್ಲಿ ತಾಪಮಾನದಲ್ಲಿ ತುಸು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೋಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ಮಾರ್ಚ್‌ 22 ಮತ್ತು 23ರಂದು ಗುಜರಾತ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ದಾಖಲೆ ಮಟ್ಟದ ತಾಪಾಮಾನ ಮುಂದುವರೆಯಲಿದೆ. ಇನ್ನು ಇಂದು (ಮಾರ್ಚ್ 20) ತಮಿಳುನಾಡಿನ ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಹಲವೆಡಯೂ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ತಿಳಿಸಿದೆ.

IMD Weather Forecast Heavy Rainfall Forecast for Next 5 days in These states from March 20

ಮಾರ್ಚ್ 21 ಮತ್ತು 22ರಂದು ಬಿಹಾರದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 20, 21 ಮತ್ತು 22ರಂದು ಪೂರ್ವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ಪಶ್ಚಿಮ ಮಧ್ಯಪ್ರದೇಶ, ಪಶ್ಚಿಮ ಬಂಗಾಳದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 20ರಿಂದ 22ರ ವರೆಗೆ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗದಲ್ಲಿ ಗಂಟೆಗೆ 40-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್‌ 21ರಂದು ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 20ರಿಂದ 22ರ ವರೆಗೆ ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಮತ್ತು ಒಡಿಶಾ, ಮಾರ್ಚ್‌ 21 ಮತ್ತು 22ರಂದು ಬಿಹಾರ, ಮಾರ್ಚ್ 20 ಮತ್ತು 21 ರಂದು ಜಾರ್ಖಂಡ್‌ನ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ಹವಾಮಾನ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

ಮಾರ್ಚ್ 21 ಮತ್ತು 23ರ ವರೆಗೆ ಈಶಾನ್ಯ ಅಸ್ಸಾಂ ಮತ್ತು ನೆರೆಹೊರೆಗಳಲ್ಲಿ ಪ್ರದೇಶಗಳಲ್ಲಿ, ಅರುಣಾಚಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದಲ್ಲಿಯೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆಯಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಬಾರಿಯೂ ಕೂಡ ಮುಂಗಾರು ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+