IMD Weather Forecast: ಈ ಭಾಗಗಳಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 4-5 ದಿನಗಳಲ್ಲಿ ಮಧ್ಯ ಭಾರತ ಮತ್ತು ಮಹಾರಾಷ್ಟ್ರದ ಹಲವೆಡೆ ಗರಿಷ್ಠ ತಾಪಮಾನ 2-4°Cರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

IMD Weather Forecast Heavy Rainfall Forecast for Next 5 days in These states from March 22

ಮುಂದಿನ ಐದು ದಿನಗಳ ಕಾಲ ಅರುಣಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳ, ಲಕ್ಷದ್ವೀಪ, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಇಂದು (ಮಾರ್ಚ್‌ 22) ಕೆಲವೇ ಕ್ಷಣಗಳಲ್ಲಿ ಪೂರ್ವ ಮಧ್ಯಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಕೇರಳ, ಮಾರ್ಚ್ 23ರಂದು ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಗಂಟೆಗೆ 40-60 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಾಗುವುದಿಲ್ಲ. ನಂತರದ ನಾಲ್ಕು ದಿನಗಳಲ್ಲಿ 3-4°C ಏರಿಕೆಯಾಗಲಿದ ಎಂದು ತಿಳಿಸಿದೆ. ಅಲ್ಲದೆ, ಪಶ್ಚಿಮ ಭಾರತದಲ್ಲಿ ಗರಿಷ್ಠ ತಾಪಮಾನವು ಮುಂದಿನ 3-4 ದಿನಗಳಲ್ಲಿ ಕ್ರಮೇಣ 2-3°C ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ದೇಶದ ಯಾವುದೇ ಭಾಗದಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವುದಿಲ್ಲ. ಮಾರ್ಚ್ 22 ಮತ್ತು 25ರ ನಡುವೆ ಗುಜರಾತ್‌ನ ಕೆಲವು ಕರಾವಳಿ ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆಯಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಪ್ರಮುಖ ನದಿ, ಜಲಾಶಯಗಳು ತುಂಬಿದ ಹಿನ್ನೆಲೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ಬಾರಿಯೂ ಕೂಡ ಮುಂಗಾರು ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+