IMD Weather Forecast: 5 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಅಂಡಮಾನ್ ಮತ್ತು ಬಂಗಾಳ ಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಹಿನ್ನೆಲೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದೀಗ ಅಂಡಮಾನ್‌ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತದ ಪರಿಣಾಮ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನೂ ಕೆಲವೆಡೆ ಗುಡುಗು, ಮಿಂಚು ಇದ್ದರೂ ಸಾಧಾರಣ ಮಳೆ ಮುಂದುವರೆಯಲಿದೆ. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಎಚ್ಚರಿಕೆ ನೀಡಿದೆ.

IMD Weather Forecast Heavy rainfall forecast for next 5 days in These states from May 17

ಈಗಾಗಲೇ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಿಂದ ಬಹುತೇಜ ಭಾಗಗಳಲ್ಲಿ ಜನರು ಅಕ್ಷರಸಃ ನಲುಗಿಹೋಗಿದ್ದಾರೆ. ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂದ ತುಂಬಾ ರಾಜ್ಯಗಳಲ್ಲಿ ಇಂತಹ ಪರಿಸ್ಥಿತಿ ಎದುರಾಗಿದೆ. ಮತ್ತೊಂದೆಡೆ ನೋಡೋದಾದ್ರೆ ಇಷ್ಟು ದಿನ ರಣಬಿಸಿಲಿನಿಂದ ಬೆಂದಿದ್ದ ಜನರಿಗೆ ಮಳೆಯಿಂದ ತುಸು ನೆಮ್ಮದಿ ತಂದಾಂಗಿದೆ.

ದಕ್ಷಿಣ ಭಾರತದಲ್ಲು ಎಲ್ಲೆಲ್ಲಿ ಮಳೆ?: ಇನ್ನು ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶದಲ್ಲಿ ಬಿರುಗಾಳಿ ಮಳೆ ಮುಂದುವರೆದಿದ್ದು, ಇದರಿಂದ ತಾಪಮಾನದಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಇದರಿಂದ ಈ ಭಾಗಗಳ ಜನರು ನೆಮ್ಮದಿಯ ನಿಟ್ಟುಸಿರುರು ಬಿಡುತ್ತಿದ್ದಾರೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಐದು ದಿನ ಎಲ್ಲೆಲ್ಲಿ ಮಳೆ?: ಈಶಾನ್ಯ ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು, ಮಿಂವು ಸಹಿತ ಮಳೆಯಿಂದಾಗಿ ಹಲವು ರಸ್ತೆಗಳು ಕಡಿತಗೊಂಡಿವೆ. ಇದರಿಂದ ವಾಹನ ಸವಾರು ಪರದಾಡಿದ ಘಟನೆಗಳು ಪಡೆದಿವೆ. ಹೀಗೆಯೇ ಮುಂದಿನ ಹಲವು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳವರೆಗೆ ಈಶಾನ್ಯ ಭಾರತದ ಎಲ್ಲಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಮಣಿಪುರ, ಸಿಕ್ಕಿಂ, ತ್ರಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್‌ನಲ್ಲಿಯೂ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಷ್ಟು ಈ ಭಾಗಗಳಲ್ಲಿ ರಣಬಿಸಿಲು ಮುಂದುವರೆದಿದ್ದು, ಜನರು ಯಾವಾಗ ಮಳೆ ಬರುತ್ತದೆಯೋ ಎಂದು ಮೋಡ ನೋಡುತ್ತಾ ಕುಳಿತುಕೊಂಡಿದ್ದರು.

ಮೇ 17 ರಂದು ಅಂದರೆ ಇಂದು ರಾಜಸ್ಥಾನದ ಬನ್ಸ್ವಾರಾ, ಬರಾನ್, ಭಿಲ್ವಾರಾ ಮತ್ತು ಬುಂಡಿಯಲ್ಲಿ ಬಿರುಗಾಳು ಮಳೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ, ಚಿತ್ತೋರ್‌ಗಢ, ಡುಂಗರ್‌ಪುರ, ಝಲಾವರ್, ಕೋಟಾ ಮತ್ತು ಪ್ರತಾಪ್‌ಗಢಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಜೊತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾರೀ ಮಳೆ ಮುನ್ಸೂಚನೆ ಹಿನ್ನೆಲೆ ಬಿಕಾನೆರ್, ಹನುಮಾನ್‌ಗಢ, ಜೈಸಲ್ಮೇರ್ ಮತ್ತು ಶ್ರೀ ಗಂಗಾನಗರಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+