IMD Weather Forecast: ಈ ಭಾಗಗಳಲ್ಲಿ ಒಂದು ವಾರ ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಚಂಡಮಾರುತದ ಪರಿಚಲನೆ ಹಿನ್ನೆಲೆ ಹಲವೆಡೆ ಮಳೆ ಆಗುತ್ತಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳ ಕಾಲ ಅರುಣಾಚಲ ಪ್ರದೇಶದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜೊತೆಗೆ ರಂಣಭೀಕರ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

IMD Weather Forecast Heavy Rainfall Forecast for Next 7 days in These states from March 17

ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಉತ್ತರ ಪ್ರದೇಶಗಳ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಹಿಮಪಾತ ಸಂಭವಿಸಿದೆ. ಇನ್ನು ಮುಂದಿನ ಹಲವು ದಿನಗಳ ಕಾಲ ಈ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್ 20ರಿಂದ 23 ರವರೆಗೆ ಪೂರ್ವ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗುಡುಗು, ಮಿಂಚು ಸಹಿತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದಲ್ಲಿ ಏರಿಕೆ: ಒಡಿಶಾ ಸೇರಿದಂತೆ ಹಲವು ಸ್ಥಳಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ನಾಳೆ ಅಂದರೆ ಮಾರ್ಚ್ 18ರ ವರೆಗೆ ಒಡಿಶಾದ ಒಳನಾಡಿನಲ್ಲಿ ತಾಪಮಾನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಲಿದೆ. ಇಂದು (ಮಾರ್ಚ್ 17) ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಉತ್ತರ ತೆಲಂಗಾಣ, ಮಾರ್ಚ್ 18ರಿಂದ 20ರ ವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಮುಂದಿನ 5 ದಿನಗಳಲ್ಲಿ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಮತ್ತು ಮಾರ್ಚ್ 17ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ತಾಪಮಾನದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಈಗಾಲೇ ಬಹುತೇಕ ಭಾಗಗಳಲ್ಲಿ ರಣಬಿಸಿಲು ಮುಂದುವರೆದ ಪರಿಣಾಮ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಆರ್ಭಟಿಸಿ ಕಾರಣ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು. ಹಾಗೆಯೇ ಈ ಬಾರಿ ಅಂದರೆ 2025ರಲ್ಲಿಯೂ ಮುಂಗಾರು ಮಳೆ ಸರಿಯಾದ ಅವಧಿಯಲ್ಲಿ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈ ಬಾರಿ ಏನೆಲ್ಲಾ ಅನಾಹುತಗಳು ಸಂಭವಿಸುತ್ತವೆಯೋ ಎಂದು ಜನರು ಆತಂಕದಲ್ಲಿದ್ದಾರೆ. ಈಗಾಗಲೇ ಬಿಸಿಲಿನಿಂದ ಬೇಸತ್ತ ಜನರು ಮುಂಗಾರು ಮಳೆ ವೇಳೆ ಏನೆಲ್ಲಾ ಅನಾಹುತಗಳು ಸಂಭವಿಸುತ್ತವೆಯೋ ಎನ್ನುವ ಆತಂಕದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+