IMD Weather Forecast: ಗುಡುಗು, ಮಿಂಚು ಸಹಿತ ಅಬ್ಬರದ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಏಳು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನೇನು ಕೆಲವೇ ದಿನಗಳಲ್ಲಿ ವಸಂತಕಾಲ ಆರಂಭ ಆಗಲಿದೆ. ಈ ನಡುವೆಯೇ ದೇಶಾದ್ಯಂತ ಹವಾಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುತ್ತಿದೆ. ಭಾರತ ಹವಾಮಾನ ಇಲಾಖೆ ಪ್ರಕಾರ, ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಇನ್ನೂ ಕೆಲವೆಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

IMD Weather Forecast Heavy Rainfall Forecast for Next 7 days in These states from March 18

ಒಂದು ವಾರ ಮಳೆ: ಚಂಡಮಾರುತದ ಪರಿಚಲನೆಯ ಹಿನ್ನೆಲೆ ಈಶಾನ್ಯ ಅಸ್ಸಾಂನಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 7 ದಿನಗಳ ಕಾಲ ಅರುಣಾಚಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-40 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಗುಡುಗು ಸಹಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಇದೇ ವೇಳೆ ಉತ್ತರ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ , ಜಾರ್ಖಂಡ್ ಮತ್ತು ಒಡಿಶಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಪಶ್ಚಿಮ ಬಂಗಾಳದಲ್ಲೂ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 19ರಿಂದ 23ರ ವರೆಗೆ, ಪೂರ್ವ ಮಧ್ಯ ಭಾರತದಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 20 ಮತ್ತು 21ರಂದು ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ವಿವರ: ಮುಂದಿನ 4-5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 3-5°C ಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಭಾರತದಲ್ಲಿ ಮುಂದಿನ 3 ದಿನಗಳವರೆಗೆ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಂತರ 2-4°C ಯಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮಾರ್ಚ್ 18ರಂದು ಒಡಿಶಾದಲ್ಲಿ ತೀವ್ರ ಶಾಖದ ಅಲೆಗಳು ಇರಲಿವೆ. ನಂತರದ ದಿನಗಳಲ್ಲೂ ಶಾಖದ ಅಲೆಗಳು ಮುಂದುವರಿಯುತ್ತದೆ. ಮಾರ್ಚ್‌ 19ರ ವರೆಗೆ ಜಾರ್ಖಂಡ್, ಉತ್ತರ ತೆಲಂಗಾಣ, ಗುಜರಾತ್ ಕರಾವಳಿ, ಕೊಂಕಣ ಮತ್ತು ಗೋವಾ, ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವದೆಹಲಿ ಹವಾಮಾನ ವಿವರ: ಮಾರ್ಚ್‌ 20ರ ವರೆಗೆ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+