IMD Weather Forecast: ಚಂಡಮಾರುತ ಹಿನ್ನೆಲೆ ಈ ಭಾಗಗಳಲ್ಲಿ ಎರಡು ದಿನ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಪ್ರಸರಣ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಚಂಡಮಾರುತ ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಇಂದು (ಅಕ್ಟೋಬರ್ 7) ರಾಷ್ಟ್ರ ರಾಜಧಾನಿ ನವದೆಹಲಿಯ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಈ ಹಿನ್ನೆಲೆ ರಸ್ತೆಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಎಚ್ಚರದಿಂದ ಪ್ರಯಾಣಿಸುವಂತೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ನೀಡಿದೆ. ಭಾರೀ ಮಳೆ ಹಿನ್ನೆಲೆ ರಾಷ್ಟ್ರ ರಾಜಧಾನಿ ನವದೆಹಲಿದೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಕೆಲವು ಗಂಟೆಗಳಲ್ಲಿ ಮಧ್ಯ, ನೈಋತ್ಯ, ಪಶ್ಚಿಮ, ವಾಯುವ್ಯ ಮತ್ತು ಉತ್ತರ ದೆಹಲಿಯ ಕೆಲವು ಭಾಗಗಳಲ್ಲಿ ಹಾಗೂ ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ. ಜೊತೆಗೆ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಮತ್ತು ಎನ್‌ಸಿಆರ್, ಹರಿಯಾಣದ ಸೋನಿಪತ್, ಖಾರ್ಖೋಡಾ, ಫರೂಖ್‌ನಗರ, ಉತ್ತರ ಪ್ರದೇಶದ ಬಾಗ್ಪತ್, ಖೇಕ್ರಾ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹರಿಯಾಣದ ಕುರುಕ್ಷೇತ್ರ, ಕೈತಾಲ್, ನರ್ವಾನಾ, ಫತೇಹಾಬಾದ್, ಪಾಣಿಪತ್, ಝಜ್ಜರ್, ಕೋಸಲಿ, ಮಹೇಂದರ್‌ಗಢ, ಬವಾಲ್, ನಾರ್ನಾಹ್, ನುವಾರಿ, ನುಲ್ಹಾಮ್, ನುಲ್ಹಾಮ್ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ, ಉತ್ತರ ಪ್ರದೇಶದ ಬರೌತ್, ಪಿಲಾಖುವಾ, ಸಿಕಂದರಾ ರಾವ್, ಹತ್ರಾಸ್, ತುಂಡ್ಲಾ, ಫಿರೋಜಾಬಾದ್, ಶಿಕೋಹಾಬಾದ್ ಹಾಗೂ ರಾಜಸ್ಥಾನದ ಭಿವಾರಿ, ತಿಜಾರಾ, ಖೈರ್ತಾಲ್, ಕೊಟ್‌ಪುಟ್ಲಿ, ವಿರಾಟ್‌ನಗರ, ರಾಜ್‌ಗಢ, ಮಹಾವಾ, ಮಹಂಡಿಪುರ್ ಬಾಲಾಜಿ, ಧೋಲ್‌ಪುರ್ ಭಾಗದಲ್ಲಿ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 2 ದಿನ ಭಾರೀ ಮಳೆ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31-33°C ಮತ್ತು 20-22°C ನಡುವೆ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications