Get Updates
Get notified of breaking news, exclusive insights, and must-see stories!

IMD Weather Forecast: ಚಂಡಮಾರುತ ಪರಿಣಾಮ ಶೀತಗಾಳಿ, ದಟ್ಟ ಮಂಜಿನ ನಡುವೆಯೂ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ತೀವ್ರಗೊಳ್ಳುತ್ತಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಉತ್ತರ ಭಾರತದಲ್ಲಿ ಡಿಸೆಂಬರ್ ಆರಂಭದಿಂದಲೂ ಶೀತಗಾಳಿ ತೀವ್ರಗೊಳ್ಳುತ್ತಲಿದೆ. ಹಲವಾರು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿದ ವಾತಾವಣ ನಿರ್ಮಾವಾಗುತ್ತಿದ್ದು, ಇದರಿಂದ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ದಿತ್ವಾ ಚಂಡಮಾರುತ ಉಂಟಾದ ಪರಿಣಾಮ ಶೀತಗಾಳಿ ನಡುವೆಯೂ ಭಾರೀ ಮಳೆ ಮುಂದುವರೆದಿದೆ.

IMD Weather Forecast Heavy Rainfall Forecast In These States For Next 2 Days from December 2

ಇನ್ನೂ ಪರ್ವತ ಪ್ರದೇಶಗಳಲ್ಲಿ ಹಿಮಪಾತ ಮುಂದುವರೆದಿದೆ. ಕಾಶ್ಮೀರದ ಬಹುತೇಕ ಭಾಗಗಳಲ್ಲಿ ತಾಪಮಾನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅಲ್ಲದೆ, ಹಿಮಪಾತ ಕೂಡ ಮುಂದುರೆದಿದೆ. ಇದರಿಂದ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಈಗಲೇ ಹೀಗೆ ಅಂದ್ರೆ ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಈ ಭಾಗಗಳ ಜನರಿದ್ದಾರೆ.

ದೆಹಲಿ-ಎನ್‌ಸಿಆರ್‌ನಲ್ಲಿ ದಟ್ಟ ಮಂಜಿನ ನಡುವೆ ಭಾರೀ ವಾಯು ಮಾಲಿನ್ಯ ಮುಂದುವರೆದಿದ್ದು, ನಿವಾಸಿಗಳಿಗೆ ಹಾಗೂ ವಾಹನ ಸವಾರರಿಗೆ ಅಡಚಣೆ ಉಂಟಾಗುತ್ತಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆಯೇ ಹೆಚ್ಚು. ಆದರೆ, ಮುಂದಿನ ದಿನಗಳಲ್ಲಿ ಈ ಭಾಗಗಳಿಗೆ ಯಾವುದೇ ಮುನ್ಸೂಚನೆ ಇಲ್ಲ. ಬದಲಾಗಿ ತಾಪಮಾನ ಇಳಿಕೆಯಾಗಲಿದ್ದು, ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್ 2 ಮತ್ತು 3ರಂದು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಮನಾರ್ಹವಾಗಿ ಇಳಿಕೆ ಆಗಲಿದೆ ಎಂದು ಐಎಂಡಿ ಇಲಾಖೆ ತಿಳಿಸಿದೆ. ಇಂದು (ಡಿಸೆಂಬರ್ 2) ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಆದರೆ, ಬೆಳಗ್ಗೆಯಂತೆ ಸಂಜೆ ವೇಳೆಯೂ ಕೂಡ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡ ದಿತ್ವಾ ಚಂಡಮಾರುತ ಪರಿಣಾಮ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ತಮಿಳುನಾಡಿನಲ್ಲಿ ರಣಮಳೆ ಮುಂದುವರೆದಿದ್ದು, ದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಇಂದು (ಡಿಸೆಂಬರ್ 2) ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ತಮಿಳುನಾಡಿನ ಚೆನ್ನೈ ಮತ್ತು ನೆರೆಯ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ಪ್ರಮುಖ ರಸ್ತೆಗಳು ಜಲಾವೃತಗೊಳ್ಳುವುದಲ್ಲದೆ, ಬೃಹತ್ ಮರಗಳು ಧರೆಗುರುಳಿ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಈಗಲೂ ಕೂಡ ಮಳೆರಾಯನ ಆರ್ಣಟ ಮುಂದುವರೆದಿದೆ. ಆದ್ದರಿಂದ ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಗ್ಗು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ 103 ದೋಣಿಗಳನ್ನು ಸಿದ್ಧವಾಗಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಮಳೆಯಲ್ಲಿ ಸಿಲುಕಿದವರ ರಕ್ಷಣೆಗೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF)ಯ ಸುಮಾರು 60 ಸಿಬ್ಬಂದಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸುಮಾರು 30 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನೂ ಹವಾಮಾನ ಇಲಾಖೆಯು ಚೆನ್ನೈ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಮಂಗಳವಾರವೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಚಂಡಮಾರುತವು ಪ್ರಸ್ತುತ ತಮಿಳುನಾಡು-ಪುದುಚೇರಿ ಕರಾವಳಿಯಲ್ಲೇ ನೆಲೆಯೂರಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಚೆನ್ನೈ ವಿಮಾನ ನಿಲ್ದಾಣ ಪ್ರಾಧಿಕಾರವು 10 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಜೊತೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಚೆನ್ನೈ ಮತ್ತು ಚೆಂಗಲ್ಪಟ್ಟು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಅನೇಕ ಶಾಲೆಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+