IMD Weather Forecast: ಈ ಭಾಗಗಳಲ್ಲಿ ಮುಂದಿನ ಎರಡು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎಡು ದಿನಗಳ ಕಾಲ ಈ ಭಾಗಗಳಲ್ಲಿ ಚಳಿಗಾಳಿ ನಡುವೆಯೇ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಬರುವ ದಿನಗಳಲ್ಲಿ ದೇಶಾದ್ಯಂತ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಡಿಸೆಂಬರ್ 6 ಮತ್ತು 7ರಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ವಾಯುವ್ಯ ಜಾರ್ಖಂಡ್, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಒಡಿಶಾದ ಉತ್ತರ ಒಳನಾಡಿನ ಪ್ರತ್ಯೇಕ ಪ್ರದೇಶಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ರಾಜ್ಯಗಳಲ್ಲಿ ತಾಪಮಾನದಲ್ಲಿ ತೀವ್ರ ಕುಸಿತ ಮುಂದುವರಿದಿದ್ದು, ಈ ನಡುವೆಯೇ ಹಲವಾರು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಡಿಸೆಂಬರ್ 8ರ ವರೆಗೆ ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಡಿಸೆಂಬರ್ 6 ಮತ್ತು 7ರಂದು ಉತ್ತರಾಖಂಡ, ಹಿಮಾಚಲ ಪ್ರದೇಶದದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಡಿಸೆಂಬರ್ 8ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಅಲ್ಲದೆ, ಡಿಸೆಂಬರ್ 7ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಜೊತೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಡಿಸೆಂಬರ್ 6 ರಿಂದ 10ರವರೆಗೆ ಮೀನುಗಾರರು ಆಗ್ನೇಯ ಅರೇಬಿಯನ್ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 10ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಪ್ರದೇಶಗಳಲ್ಲಿ, ಡಿಸೆಂಬರ್ 6 ರಿಂದ 8ರ ವರೆಗೆ ಹಿಮಾಚಲ ಪ್ರದೇಶ ಮತ್ತು 6 ಮತ್ತು 7ರಂದು ಒಡಿಶಾದಲ್ಲಿ ಬೆಳಗಿನ ವೇಳೆ ದಟ್ಟ ಮಂಜಿನ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಷ್ಟ್ರ ರಾಜಧಾನಿ ಹವಾಮಾನ ವಿವರ: ಮುಂದಿನ 6 ದಿನಗಳವರೆಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಆದರೆ, ಡಿಸೆಂಬರ್ 7ರಂದು ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಳ ಆಗಲಿದ್ದು, ಮುಂಜಾನೆ ವೇಳೆ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications