IMD Weather Forecast: ಮುಂದಿನ ಎರಡು ದಿನ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಚಳಿ ಪ್ರಮಾಣ ಕಡಿಮೆಯಾಗಿದ್ದು, ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈಗಾಗಲೇ ಕಳೆದ ಎರಡು ದಿನಗಳಿಂದ ಉತ್ತರ ಭಾರತದ ಹಲವೆಡೆ ಹಿಮಪಾತದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನೂ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಭಾರೀ ಮಳೆ ಜೊತೆಗೆ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಮಾರ್ಚ್ 2ರಿಂದ 4ರ ವರೆಗೆ ಜಮ್ಮು ಮತ್ತು ಕಾಶ್ಮೀರ , ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 3ರಂದು ಜಮ್ಮು ಮತ್ತು ಕಾಶ್ಮೀರ , ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶಗಳ, ಇನ್ನು ಇಂದು (ಮಾರ್ಚ್ 2) ಅರುಣಾಚಲ ಪ್ರದೇಶ , ಈಶಾನ್ಯ ಅಸ್ಸಾಂ ಮತ್ತು ನಾಗಾಲ್ಯಾಂಡ್‌ನಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸುಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಇದೇ ವೇಳೆ ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಉಳಿದ ದಕ್ಷಿಣದ ಹಲವು ರಾಜ್ಯಗಳಲ್ಲಿ ಬಿಸಿ ಗಾಳಿ ವಾತಾವರಣ ಮುಂದುವರೆಯಲಿದೆ. ಇನ್ನು ಮಾರ್ಚ್ 3ರ ವರೆಗೂ ಕರಾವಳಿ ಕರ್ನಾಟಕದಾದ್ಯಂತ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಮಾರ್ಚ್ 2 ಮತ್ತು 3ರಂದು ಕೊಂಕಣ ಮತ್ತು ಗೋವಾದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ. ಇಂದು ಭಾನುವಾರ ರಾಷ್ಟ್ರ ರಾಜಧಾನಿಯ ನವದೆಹಲಿಯ ಕೆಲವು ಭಾಗಗಳಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿತ್ತು. ಈ ಭಾಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 15 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಪಾಮಾನ ದಾಖಲೆಯ ವಿವರ: ಮುಂದಿನ 2 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು 2-3°Cಯಷ್ಟು ಏರಿಕೆಯಾಗಲಿದೆ. ಮಧ್ಯ ಭಾರತದಲ್ಲಿ ಮುಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಕಂಡುಬರುವುದಿಲ್ಲ. ಗುಜರಾತ್‌ನಲ್ಲಿ ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3°C ರಷ್ಟು ಇಳಿಕೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ಕಳೆದ ವರ್ಷ ಅಂದರೆ, 2024ರಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಪ್ರವಾಹದಂತಹ ವಾತಾವರಣ ಸೃಷ್ಟಿಯಾಗಿ ಅವಾಂತರಗಳೇ ಸೃಷ್ಟಿಯಾಗಿದ್ದವು. ಮತ್ತೊಂದೆಡೆ ದಕ್ಷಿಣ ಭಾರತದ ಕೇರಳದ ವಯನಾಡಿನಲ್ಲಿ ಪ್ರವಾಹ ಬಂದು ಗುಡ್ಡ ಕುಸಿದು ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು.
ಮತ್ತೊಂದೆಡೆ ನೋಡೋದಾದ್ರೆ, ಕಳೆದ ವರ್ಷ ಸುರಿದ ಮುಂಗಾರು ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಯಾಕಂದ್ರೆ ಅದರ ಹಿಂದಿನ ವರ್ಷ ಅಂದ್ರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಭಾಗಗಳಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯ ಶಾಖಕ್ಕೆ ಸುಟ್ಟು ಹೋಗಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications