IMD Weather Forecast: ಜೂನ್ 30ರ ವರೆಗೂ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಿಗೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗುರುವಾರ (ಮೇ 29) ದೇಶದ ಹಲವೆಡೆ ಬಿರುಗಾಳಿ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬುಧವಾರ ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಿದ್ದು, ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ, ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಮುಂದಿನ 2 ದಿನಗಳ ಕಾಲ ಕೇರಳ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗಗಳಲ್ಲಿ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ, ಕೇರಳದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದೇ ವೇಳೆ ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೆ, ಛತ್ತೀಸ್‌ಗಢ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲೂ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೇಶದ ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿದ್ದವು. ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಈಗಾಗಲೇ ದಕ್ಷಿಣ ಭಾರತದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮುಂದಿನ ದಿನಗಳಲ್ಲಿ ಇನ್ನೇನು ಅನಾಹುತಗಹಳು ಸಂಭವಿಸಲಿಯೋ ಎನ್ನುವ ಭಯ ಜನರಲ್ಲಿ ಕಾಡತೊಡಗಿದೆ.












Click it and Unblock the Notifications