IMD Weather Forecast: ಈ ಭಾಗಗಳಲ್ಲಿ ಎರಡು ದಿನ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮತ್ತೊಂದೆಡೆ, ಕೆಲವೇ ದಿನಗಳಲ್ಲಿ ದೇಶದ ಬಹುತೇಕ ಕಡೆಗಳಲ್ಲಿ ಚಳಿ ಆವರಿಸಲಿದೆ ಅಂತಲೂ ಮುನ್ಸೂಚನೆ ನೀಡಿದೆ.

IMD Weather Forecast Heavy Rainfall Forecast In These States For Next 2 Days from November 9

ಇದೀಗ ಸದ್ಯ ದೇಶದ ಕೆಲವೆಡ ಭೀಕರ ಚಳಿ ವಾತಾವರಣ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ದೇಶದ ಉತ್ತರ ಮತ್ತು ಮಧ್ಯ ಭಾಗದಲ್ಲಿ ರಾತ್ರಿ ವೇಳೆ ಚಳಿ ಇದ್ದು, ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗುತ್ತಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಮುಂಬರುವ ದಿನಗಳಲ್ಲಿ ಶೀತ ಅಲೆಯ ಪರಿಸ್ಥಿತಿಗೆ ಒಳಗಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಮಳೆ?: ಮತ್ತೊಂದೆಡೆ ಚಳಿ ನಡುವೆಯೂ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ತಮಿಳುನಾಡು ಮತ್ತು ಕೇರಳದ ಹಲವಾರು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದೇ ಅವಧಿಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಆದರೆ, ಬೆಳಗ್ಗೆ ಹಾಗೂ ಸಂಜೆ ಮಂಜು ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದಕ್ಕೂ ಮಿಗಿಲಾಗಿ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಾಗುವುದಿಲ್ಲ ಎಂದು ತಿಳಿಸಿದೆ.

ಈ ನಡುವೆಯೂ ಮುಂದಿನ ಎರಡು ದಿನ ಉತ್ತರ ಭಾರತದ ರಾಜ್ಯಗಳ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಭಾರತದ ತಮಿಳುನಾಡು, ಪುದುಚೇರಿ, ಕಾರೈಕಲ್‌, ಕೇರಳ, ಮಾಹೆಯಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯವಾರು ಹವಾಮಾನ ವಿವರ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನವೆಂಬರ್ 9-10ರ ಅವಧಿಯಲ್ಲಿ ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಶೀತ ಅಲೆಗಳ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ದಕ್ಷಿಣ ಪಂಜಾಬ್ ಮತ್ತು ದಕ್ಷಿಣ ಹರಿಯಾಣದ ಕೆಲವು ಪ್ರದೇಶಗಳಲ್ಲಿ ರಾತ್ರಿ ವೇಳೆ 10°Cಗಿಂತ ಕಡಿಮೆಯಾಗುವ ಮತ್ತು ಸಾಮಾನ್ಯಕ್ಕಿಂತ 4-7°Cಗಿಂತ ಕಡಿಮೆಯಿರುವ ನಿರೀಕ್ಷೆಯಿದೆ.

ಅದೇ ಅವಧಿಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ, ಪೂರ್ವ ಮಧ್ಯಪ್ರದೇಶ, ಪಶ್ಚಿಮ ರಾಜಸ್ಥಾನ, ಉತ್ತರ ಮಹಾರಾಷ್ಟ್ರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ರಾತ್ರಿ ವೇಳೆ ಸಾಮಾನ್ಯಕ್ಕಿಂತ 2-4°C ಗಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನವೆಂಬರ್ 9ರಿಂದ 11ರ ವರೆಗೆ ಬೆಳಗಿನ ಸಮಯದಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಪ್ರಸ್ತುತ ಕ್ರಮವಾಗಿ 10-12°C ಮತ್ತು 25-27°Cನಷ್ಟು ದಾಖಲಾಗುವ ಸಾಧ್ಯತೆಯಿದೆ. ಇನ್ನೂ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದ್ದು, ಇದು ವಾಹನ ಸವಾರರಿಗೆ ಅಡಚಣೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+