IMD Weather Forecast: ಈ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ತಾಪಮಾನ ಇಳಿಕೆಯಾಗುತ್ತಿದ್ದು, ಚಳಿ ಆವರಿಸಿದೆ. ಈ ನಡುವೆಯೇ ಈ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ಬಿರುಗಾಳಿ ಸಹಿತ ರಣಭೀಕರ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹಲವೆಡೆ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿ ನಡುವೆಯೂ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಮುಂದಿನ ದಿನಗಳಲ್ಲಿ ಉತ್ತರದ ಭಾರತದ ಹಲವಾರು ರಾಜ್ಯಗಳಲ್ಲಿ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ತಾಪಮಾನವು ಕಡಿಮೆ ಇರುತ್ತದೆ ಎಂದು ತಿಳಿಸಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ.
ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯಾಗುವ ವೇಳೆ ಯಾವುದೇ ರೀತಿಯ ಅನಾನುಕೂಲತೆಗಳನ್ನು ತಪ್ಪಿಸಲು ಹವಾಮಾನ ಇಲಾಖೆ ನಿವಾಸಿಗಳು ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ತಮ್ಮ ಪ್ರವಾಸಗಳನ್ನು ಮುಂದೂಡಿಕೆ ಮಾಡುವುದು ಒಳಿತು ಎಂದು ಸಲಹೆ ನೀಡಿದೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ ಮತ್ತು ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೀಗ ಭೀಕರ ಚಳಿ ಮುಂದುವರೆದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್, ಮೀರತ್, ಮುಜಾಫರ್ ನಗರ, ಗೋರಖ್‌ಪುರ, ಕಾನ್ಪುರ, ವಾರಣಾಸಿ, ಇಟಾವಾ, ಕನೌಜ್, ಅಯೋಧ್ಯೆ, ಆಗ್ರಾ, ಅಲಿಗಢದಲ್ಲಿ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ ಎಂದು ವರದಿಯಾಗಿದೆ.
ಅಲ್ಲದೆ, ಫಿರೋಜಾಬಾದ್, ಝಾನ್ಸಿ, ಲಲಿತ್‌ಪುರ, ಜಲೌನ್, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ, ಅಮೇಥಿ, ಪ್ರತಾಪ್, ಪ್ರತಾಪ್, ಪ್ರತಾಪ್, ಪ್ರತಾಪ್, ಪ್ರತಾಪ್, ಕನೌಜ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದೇ ರೀಯ ವಾತಾವರಣ ಕಂಡುಬಂದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಸೋನ್‌ಭದ್ರ, ಮಹಾರಾಜ್ ಗಂಜ್, ಬಹ್ರೈಚ್, ರಾಮ್‌ಪುರ್, ಬರೇಲಿ ಮತ್ತು ಘಾಜಿಪುರದಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಕುಸಿತ ಕಾಣು ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಕೇರಳ, ತಮಿಳುನಾಡು, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಹಲವಾರು ದಕ್ಷಿಣ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿರಂತರ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ನೀರು ನಿಲ್ಲುವುದು ಮತ್ತು ವಿದ್ಯುತ್ ಕಡಿತದಂತಹ ಹಲವಾರು ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಉತ್ತರದ ಭಾರತ್ ಹಲವು ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕನಿಷ್ಠ ತಾಪಮಾನ 7-10 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ಉತ್ತರ ಭಾರತದ ರಾಜ್ಯಗಳಲ್ಲಿ ಭೀಕರ ಚಳಿ ವಾತಾವರಣ ಇರಲಿದೆ ಎಂದು ತಿಳಿಸಿದೆ.












Click it and Unblock the Notifications