IMD Weather Forecast: ಚಂಡಮಾರುತ ಹಿನ್ನೆಲೆ ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ರಣಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರೀ ಮಳೆ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವೆಡೆ ಮುಂಜಾಗ್ರತಾ ಕ್ರಮವಾಗಿ ಕೆಳದ ಕೆಲ ದಿನಗಳಿಂದ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆರಾಯನ ಆರ್ಭಟ ಹೀಗೆ ಮುಂದುವರೆದರೆ, ರಜೆ ವಿಸ್ತರಣೆ ಮಾಡುವ ಸಾಧ್ಯತೆಯೂ ಇದೆ. ಹಾಗಾದ್ರೆ, ಯಾವ ಭಾಗದಲ್ಲಿ ಹೆಚ್ಚು ಮಳೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ನೋಡಿ.

IMD Weather Forecast Heavy Rainfall Forecast In These States for Next 3 Days from December 5

ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದ್ದು, ಈ ನಡುವೆಯೇ ದಕ್ಷಿಣದ ಕೆಲವೆಡೆ ಚಂಡಮಾರುತ ಪರಿಣಾಮ ಭಾರೀ ಮಳೆ ಮುಂದುವರೆದಿದೆ. ಮುಂದಿನ ಹಲವು ದಿನಗಳ ಕಾಲ ಈ ಭಾಗಗಳಲ್ಲಿ ಮಳೆರಾಯನ ಆರ್ಭಟ ಇರಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಯೆಲ್ಲೋ ಅಲರ್ಟ್‌ ಘೋಷಣೆ: ಭಾರತ ಹವಾಮಾನ ಇಲಾಖೆಯು, ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಡಿಸೆಂಬರ್ 5) ತಮಿಳುನಾಡಿನ ಪುದುಚೇರಿ, ಕಾರೈಕಲ್‌ಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಮತ್ತೊಂದೆಡೆ ದಟ್ಟ ಮಂಜು ಮುನ್ಸೂಚನೆ ಹಿನ್ನೆಲೆ ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ಮಣಿಪುರ, ಒಡಿಶಾ ಸೇರಿದಂತೆ ಹಲವಾರು ರಾಜ್ಯಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಮೂರು ದಿನ ಭಾರೀ ಮಳೆ: ಮುಂದಿನ ಮೂರು ದಿನಗಳವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ದಕ್ಷಿಣ ಕೇರಳ, ದಕ್ಷಿಣ ತಮಿಳುನಾಡು ಮತ್ತು ದ್ವೀಪಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಷ್ಟ್ರ ರಾಜಧಾನಿ ಹವಾಮಾನ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇಂದು (ಡಿಸೆಂಬರ್ 5) ಶುಕ್ರವಾರ ಬೆಳಗ್ಗೆ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟಿದ್ದು, ಜನರು ಹಾಗೂ ವಾಹನ ಸವಾರರು ಸಮಸ್ಯೆ ಎದುರಿಸಿರುವ ಬಗ್ಗೆ ವರದಿಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇಂದು ಕನಿಷ್ಠ ತಾಪಮಾನವು 4-6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಗರಿಷ್ಠ ತಾಪಮಾನವು 21 ರಿಂದ 23 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನೂ ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು ಕವಿದ ವಾತಾವರಣ ಇರಲಿದ್ದು, ಜೊತೆಗೆ ಚಳಿ ಪ್ರಮಾಣ ಕೂಡ ಹಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.

ಶೀತಗಾಳಿ ಹೆಚ್ಚಳದ ಮುನ್ಸೂಚನೆ: ಮುಂದಿನ ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ಗಮನಾರ್ಹವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಪೂರ್ವ ರಾಜಸ್ಥಾನ, ಜಾರ್ಖಂಡ್‌ ಭೀಕರ ಚಳಿ ಇರಲಿದ್ದು, ಈ ಭಾಗಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಭಾರತದ ಹಲವಾರು ಭಾಗಗಳಲ್ಲಿ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಕಂಡುಬರಲಿದೆ. ಡಿಸೆಂಬರ್ 5 ರಿಂದ 9ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಡಿಸೆಂಬರ್ 7 ರವರೆಗೆ ಹಿಮಾಚಲ ಪ್ರದೇಶ, ಒಡಿಶಾದಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಮುಂದಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ತಾಪಮಾನ ಕಡಿಮೆಯಾಗಲಿದ್ದು, ಚಳಿ ಪ್ರಮಾಣ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+