IMD Weather Forecast: ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಉತ್ತರ ಭಾರತದ ರಾಜ್ಯಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆ ಆಗುತ್ತಲಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಪರಿಣಾಮ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ತಾಪಮಾನದಲ್ಲಿ ಭಾರೀ ಇಳಿಕೆ: ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಮುಂಬರುವ ದಿನಗಳಲ್ಲಿ ತಾಪಮಾನದಲ್ಲಿ ತೀವ್ರವಾಗಿ ಕುಸಿತ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ರಾಜ್ಯಗಳಲ್ಲಿ ರಾತ್ರಿ ವೇಳೆ ಕನಿಷ್ಠ ತಾಪಮಾನವು ಈಗಾಗಲೇ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದ್ದು, ಇದರಿಂದ ಇಲ್ಲಿನ ನಿವಾಸಿಗಳು ಈಗಲೇ ಹಿಂದೆ ಮುಂದಿನ ದಿನಗಳಲ್ಲಿ ಇನ್ನೇನು ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಹಿಮಪಾತ ಆಗುತ್ತಿದೆ. ಇದರೊಂದಿಗೆ ಬಿಸಿಲು ಕೂಡ ಇರುವುದರಿಂದ ಈ ಭಾಗಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಲಿದ್ದಾರೆ. ಮುಂದಿನ ದಿನಗಳಲ್ಲೂ ಈ ಪ್ರದೇಶಗಳಲ್ಲಿ ಹಿಮಪಾತ ಮುಂದುವರಿಯುವ ಸಾಧ್ಯತೆಯಿದೆ. ಆದ್ದರಿಂದ ಪ್ರವಾಸಿಗರು ಎಚ್ಚರದರಿಂದ ಇರುವುದು ಒಳಿತು ಎಂದು ಸಲಹೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ: ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಹಲವೆಡೆ ಹಾಗೂ ಇನ್ನೂ ಕೆಲವು ದಕ್ಷಿಣ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂದಿನ ಕೆಲವು ದಿನಗಳವರೆಗೆ ಮೀನುಗಾರರು ಸಮುದ್ರ ತೀರಗಳಿಂದ ದೂರವಿರುವಂತೆ ಐಎಂಡಿ ಸೂಚನೆ ನೀಡಿದೆ. ಮತ್ತೊಂದೆಡೆ ಚಳಿ ಪ್ರಮಾಣವೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಕುಸಿತ ಆಗಲಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲವು ದಿನಗಳವರೆಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ತಮಿಳುನಾಡಿನ ಚೆನ್ನೈ ಭಾಗದಲ್ಲೇ ಹೆಚ್ಚು ಮಳೆಯಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ, ಭಾರೀ ಮಳೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿತ್ತು. ಇದೀಗ ಸದ್ಯ ಮಳೆರಾಯನ ಆರ್ಭಟ ತಗ್ಗಿದ್ದು, ಅಲ್ಲಲ್ಲಿ ಮಾತ್ರ ಮಳೆಯಾಗುತ್ತಿದೆ. ಜೊತೆಗೆ ಬಹುತೇಕ ಕಡೆಗಳಲ್ಲಿ ದಟ್ಟ ಮಂಜು ಸಹಿತ ಭೀಕರ ಚಳಿ ಮುಂದುವರೆದಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications