IMD Weather Forecast: ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶದ ಬಹುತೇಕ ಪ್ರದೇಶಗಳಲ್ಲಿ ತಾಪಮಾನದ ಜೊತೆಗೆ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ. ಈ ನಡುವೆಯೇ ಮುಂದಿನ ಹಲವು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಅದರಲ್ಲೂ ಮುಂದಿನ ಹಲವು ದಿನಗಳವರೆಗೆ ಈಶಾನ್ಯ ಅಸ್ಸಾಂ, ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮಹಾರಾಷ್ಟ್ರ ಮತ್ತು ಪಕ್ಕದ ಭಾಗಗಳಲ್ಲಿ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 1 ಮತ್ತು 2 ರಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್ ಮತ್ತು ಆಂಧ್ರಪ್ರದೇಶದ ಹಲವೆಡೆ ಗಾಳಿಯ ವೇಗ ಗಂಟೆಗೆ 30 ರಿಂದ 60 ಕಿ.ಮೀಟರ್ ವೇಗದಲ್ಲಿ ಇರಲಿದೆ. ಜೊತೆ ಭಾರೀ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಕೇರಳ, ಕರ್ನಾಟಕ, ಕರಾವಳಿ ಆಂಧ್ರಪ್ರದೇಶ ಸೇರಿದಂತೆ ಉತರ ರಾಜ್ಯಗಳಲ್ಲಿ ಮಾರ್ಚ್ 31ರಿಂದ ಏಪ್ರಿಲ್ 2ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಏಪ್ರಿಲ್ 1, 2 ರಂದು ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ರಾಜ್ಯಗಳಲ್ಲಿ ಹಾಗೂ ಕರಾವಳಿ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯಾಗುವ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ ಹಲವು ದಿನಗಳವರೆಗೆ ಒಡಿಶಾದ ಒಳಭಾಗ ಮತ್ತು ಪಶ್ಚಿಮ ಬಂಗಾಳದ ಗಂಗಾ ನದಿ ತೀರದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆಯ ವಾತಾವರಣ ಇರಲಿದೆ. ಏಪ್ರಿಲ್ 2ರ ವರೆಗೆ ಗುಜರಾತ್‌ನ ಕರಾವಳಿ ಪ್ರದೇಶ, ಮಾರ್ಚ್ 31ರಂದು ಅಸ್ಸಾಂ ಮತ್ತು ತ್ರಿಪುರದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಬಾರಿ ಅಂದರೆ 2024ರಲ್ಲು ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಕೆರೆ, ಕಟ್ಟೆಗಳು, ನದಿಗಳು ಸೇರಿದಂತೆ ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತ್ತು. ಇನ್ನು ಈ ಬಾರಿ ಅಂದರೆ 2025ರಲ್ಲಿ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಬಾರಿ ಏನೆಲ್ಲಾ ಅವಾಂತರಗಳಿ ಸಂಭವಿಸುತ್ತವೆಯೂ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈಗಾಗಲೇ ಬಿರುಬಿಸಿಲಿನಿಂದ ಜನರು ಬೇಸತ್ತಿದ್ದು, ಮಳೆ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.












Click it and Unblock the Notifications