IMD Weather Forecast: ಈ ಭಾಗಗಳಲ್ಲಿ 3 ದಿನ ರಣಭೀಕರ ಮಳೆ ಮುನ್ಸೂಚನೆ; ಮುಂಗಾರಿನ ಹೊಸ ದಾಖಲೆ..

IMD Weather Forecast: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ಅವಧಿಗೂ ಮುನ್ನ ಕೆಲವೆಡೆ ಮುಂಗಾರು ಎಂಟ್ರಿ ಕೊಟ್ಟು ಅಚ್ಚರಿ ಮೂಡಿಸಿದೆ.

IMD Weather Forecast Heavy rainfall forecast in These states for Next 3 days from May 26

ಪ್ರತಿ ಬಾರಿಯೂ ಜೂನ್‌ ಆರಂಭದಲ್ಲಿ ಕೇರಳಕ್ಕೆ ಮೊದಲು ಮುಂಗಾರು ಎಂಟ್ರಿ ಕೊಡುತ್ತಿತ್ತು. ಆದರೆ, ಈ ಬಾರಿ ಅವಧಿಗೂ ಮುನ್ನವೇ ಆಗಮಿಸಿದೆ. ಕೇರಳಕ್ಕೆ ಬಂದ ಒಂದು ದಿನದ ನಂತರ ಮಹಾರಾಷ್ಟ್ರಕ್ಕೆ ಪ್ರವೇಶಿಸಿದ್ದು, 35 ವರ್ಷಗಳ ನಂತರ ಮೊದಲ ಬಾರಿಗೆ ಹೀಗೆ ಅವಧಿಗೂ ಮುನ್ನ ಮುಂಗಾರು ಆಗಮನ ಕೊಟ್ಟಂತಾಗಿದೆ.

ನಿಗದಿತ ಸಮಯಕ್ಕಿಂತ ಮೊದಲೇ ಕೆಲವು ರಾಜ್ಯಗಳಿಗೆ ಮುಂಗಾರು ಆಗಮನ ಆಗಿದ್ದು, ಭಾರಿ ಮಳೆ ಮುಂದುವರೆದಿದೆ. ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂದಿನ ಮೂರು ದಿನಗಳ ಕಾಲ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಬೆಂಗಳೂರು ಸೇರಿ ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ಭಾನುವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಅಷ್ಟೇ ಅಲ್ಲದೆ ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಯಾಗಿ ಮಾರ್ಪಟ್ಟಿದ್ದು, ಇದರಿಂದ ವಾಹನ ಸವಾರರು ಪರಡಾಟಿದ ಘಟನೆಗಳು ನಡೆದಿವೆ. ಹಾಗೆಯೇ ಇಂದು ಅಂದರೆ ಸೋಮವಾರವೂ ಸಹ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಮೇ 26) ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಕೆಲವೆಡೆ, ಕೇರಳ, ತಮಿಳುನಾಡು ಹಾಗೂ ಕಾರೈಕಲ್ನಲ್ಲಿ ಭಾರೀ ಮಳಯಾಗಲಿದೆ. ಗೋವಾ, ಮಧ್ಯ ಮಹಾರಾಷ್ಟ್ರದಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ, ಇಂದು ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಛತ್ತೀಸ್ಗಢ, ಆಂಧ್ರಪ್ರದೇಶ, ಗುಜರಾತ್, ಲಕ್ಷದ್ವೀಪ, ನಾಗಾಲ್ಯಾಂಡ್, ಪಣಿಪುರ, ಮಿಜೋರಾಂ, ತ್ರಿಪುರಾ, ಬಿಹಾರ, ಮಧ್ಯಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದ್ದು, ಜೊತೆಗೆ ಗಾಳಿಯು ಗಂಟೆಗೆ 50-60 ಕಿಲೋ ಮೀಟರ್‌ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ಹೇಳೋದಾದ್ರೆ, ಈ ಬಾರಿ ಅವಧಿಗಿಂತ 8 ದಿನ ಮೊದಲೇ ಮುಂಗಾರು ಕೇರಳಕ್ಕೆ ಎಂಟ್ರಿಯಾಗಿದ್ದು, ಬಳಿಕ ಇತರ ನೆರೆಯ ರಾಜ್ಯಗಳಿಗೂ ಪ್ರವೇಶ ಮಾಡಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಆರಂಭದಲ್ಲೇ ಹೀಗೆ ಆದ್ರೆ ಇನ್ನೂ ಮುಂದಿನ ದಿನಗಳಲ್ಲಿ ಏನು ಗತಿ ಕಾದಿದೆಯೋ ಎಂದು ಜನರು ಆತಂಕ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+