IMD Weather Forecast: ವಾಯುಭಾರ ಕುಸಿತ ಹಿನ್ನೆಲೆ ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಚಳಿ ಆರಂಭವಾಗಿದೆ. ಈ ನಡುವೆಯೇ ಹಲವೆಡೆ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಭೀಕರ ಚಳಿ ನಡುವೆಯೂ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣೆ ಮಳೆಯಾದ್ರೆ, ಇನ್ನೂ ಕಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದ ಕಾರಣ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಆರೋಗದ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದೇಶಾದ್ಯಂತ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅದರಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಚಳಿ ನಡುವೆಯೂ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ತಮಿಳುನಾಡು ಭಾಗದಲ್ಲಿ ಅಬ್ಬರದ ಮಳೆ ಮುಂದುವರೆದ ಕಾರಣ ಇಲ್ಲಿನ ಹಲವು ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಕೆಲ ದಿನಗಳಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆಯಾಗುತ್ತಲಿದೆ. ಅದರಲ್ಲೂ, ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ತಾಪಮಾನದಲ್ಲಿ ತೀವ್ರ ಇಳಿಕೆ ಕಂಡುಬರುತ್ತಿದೆ. ಮತ್ತೊಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ. ಈ ಚಂಡಮಾರುತದ ಪ್ರಸರಣ ಮುಂದಿನ ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರದವರೆಗೂ ವಿಸ್ತರಿಸುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಭಾರೀ ಮಳೆ ಎಚ್ಚರಿಕೆ: ಮುಂದಿನ ದಿನಗಳಲ್ಲಿ ತಮಿಳುನಾಡು, ಕೇರಳ, ಮಾಹೆ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ತಮಿಳುನಾಡಿನಲ್ಲಿ ನವೆಂಬರ್ 22 ರವರೆಗೂ ಭಾರೀ ಮಳೆಯಾಗಲಿದೆ. ಜೊತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಅಲ್ಲದೆ, ಉತ್ತರ ಭಾರತದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಹಿಮಪಾತ ಮುಂದುವರೆದಿದೆ. ಈ ಭಾಗದಲ್ಲಿ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಮುಂದಿನ ದಿನಗಳಲ್ಲೂ ಸಹ ಇನ್ನೂ ಹೆಚ್ಚಿನ ಪ್ರಮಾಣದಕ್ಕಿ ತಾಪಮಾನ ಕುಸಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇದೀಗ ಈ ಭಾಗಗಳಲ್ಲಿ ಭೀಕರ ಚಳಿ ವಾತಾವರಣ ಮುಂದುವರೆದಿದ ಎಂದು ತಿಳಿದುಬಂದಿದೆ.
ಕಳೆದ 24 ಗಂಟೆಗಳಲ್ಲಿ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿದಂತೆ ಮಧ್ಯ ಭಾರತದ ಹಲವಾರು ಪ್ರದೇಶಗಳಲ್ಲಿ ತೀವ್ರ ಶೀತ ಅಲೆಯ ಪರಿಸ್ಥಿತಿ ನಿರ್ಮಾಣ ಆಗಿರುವ ವಗ್ಗೆ ವರದಿಯಾಗಿದೆ. ಪಶ್ಚಿಮ ಮಧ್ಯಪ್ರದೇಶದ ರಾಜ್‌ಗಢ ಭಾಗದಲ್ಲಿ ಅತ್ಯಂತ ಕಡಿಮೆ ತಾಪಮಾನ 6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನೂ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 17ರಿಂದ 19ರ ವರೆಗೆ ಮಧ್ಯಪ್ರದೇಶದಲ್ಲಿ ಶೀತಗಾಳಿಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಅದೇ ಅವಧಿಯಲ್ಲಿ ಪಶ್ಚಿಮ ರಾಜಸ್ಥಾನ, ವಿದರ್ಭ, ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ ಅಂತ್ಯಕ್ಕೂ ಮುನ್ನ ಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಯಾವ ಮಟ್ಟಿಗೆ ಹೆಚ್ಚಳ ಆಗಬಹುದು ಎಂದು ಊಹಿಸಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತದೆ.
-
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications