IMD Weather Forecast: ಚಳಿ ನಡುವೆಯೂ ಈ ಭಾಗಗಳಲ್ಲಿ ಮುಂದಿನ 3 ದಿನ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಆವರಿಸಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ಸೆನ್ಯಾರ್ ಚಂಡಮಾರುತ ಪರಿಣಾಮ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಸ್ಸಾಂ, ಮಿಜೋರಾಂ, ತ್ರಿಪುರ, ಶಿಲ್ಲಾಂಗ್, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಇತರ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರೆಯಲಿದೆ. ಜೊತೆಗೆ ಚಳಿ ಪ್ರಮಾಣ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಚೆನ್ನೈನಲ್ಲಿ ಇಂದು (ನವೆಂಬರ್ 27) ಬೆಳಗ್ಗೆ 6:07ಕ್ಕೆ ದಟ್ಟ ಮಂಜು ಕವಿದಿದ್ದು, ಸಂಜೆಯೂ ಇದೇ ರೀತಿಯ ವಾತಾವರಣ ಇರಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಚೆನ್ನೈನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು 28 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಇನ್ನೂ ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ, ತಿರುವಲ್ಲೂರು, ಪುದುಚೇರಿ, ಕಾರೈಕಲ್, ಕಡಲೂರು, ಮೈಲಾಡುತುರೈ, ಶಿವಗಂಗಾ, ತೆಂಕಸಿ, ಕನ್ಯಾಕುಮಾರಿ, ತೇಣಿ, ವಿರುಧುನಗರ, ನಾಗಪಟ್ಟಣಂ, ಪುದುಚೇರಿ, ಧರ್ಮಪುರಿ ಮತ್ತು ರಾಮನಾಥಪುರಂನ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ನವೆಂಬರ್ 27 ಮತ್ತು 28ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 40-50 ಕಿ.ಮೀಟರ್‌ವರೆಗೂ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ ಹವಾಮಾನ: ಕೇರಳದ ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತಿರುವನಂತಪುರಂ, ಆಲಪ್ಪುಳ ಮತ್ತು ಇಡುಕ್ಕಿಯಲ್ಲಿ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆ ಈ ಭಾಗಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಪ್ರವಾಸಿಗರು, ಮೀನುಗಾರರು ಮತ್ತು ಸ್ಥಳೀಯರು ಸಮುದ್ರಕ್ಕೆ ಇಳಿಯುವುದನ್ನು ತಪ್ಪಿಸಬೇಕು ಎಂದು ಐಎಂಡಿ ಸಲಹೆ ನೀಡಿದೆ.
ಅಲ್ಲದೆ, ಭಾರೀ ಮಳೆಯಾಗುವಂತಹ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು, ಸ್ಥಳೀಯ ಹವಾಮಾನ ಸಂಸ್ಥೆಯ ಮಾರ್ಗಸೂಚಿಗಳನ್ನು ಅನುಸರಿಸಬೇಕು ಅಂತಲೂ ಸಲಹೆ ನೀಡಿದೆ. ಮತ್ತೊಂದೆಡೆ ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications