IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ

India Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನೂ ನವೆಂಬರ್ 10ರ ವರೆಗೂ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮಿಂದಿನ ಹಲವು ದಿನಗಳವರೆಗೂ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ "ಮೋಂಥಾ" ಚಂಡಮಾರುತದ ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿದು ಅವಾಂತರಗಳೇ ಸೃಷ್ಟಿಯಾಗಿವೆ.

IMD Weather Forecast Heavy Rainfall Forecast In These States For Next 3 Days from November 7

ಇಂದು (ನವೆಂಬರ್ 7) ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ಸೇರಿದಂತೆ ಹಲವಾರು ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ತಮಿಳುನಾಡು, ಕೇರಳ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ದ್ವೀಪ ಪ್ರದೇಶಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ದಕ್ಷಿಣ ಭಾರತದಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 7 ಮತ್ತು 8ರಂದು ತಮಿಳುನಾಡಿನ ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 8 ರಿಂದ 10ರ ವರೆಗೆ ಕೇರಳ ಮತ್ತು ಮಾಹೆಯಲ್ಲೂ ಇದೇ ರೀತಿಯ ಹವಾಮಾನ ಪರಿಸ್ಥಿತಿ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ನವದೆಹಲಿಯಲ್ಲಿ ಹವಾಮಾನ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರದವರೆಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿನ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾದ್ರೆ, ಗರಿಷ್ಠ ತಾಪಮಾನವು 25ರಿಂದ 27 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಗುರುವಾರ ಕನಿಷ್ಠ ತಾಪಮಾನ ಸುಮಾರು 13°C ಇದ್ದರೆ, ಗರಿಷ್ಠ ತಾಪಮಾನ 27°C ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ಪ್ರಕಾರ, ದೆಹಲಿಯಲ್ಲಿ ಬೆಳಗ್ಗೆ 9 ಗಂಟೆಗೆ ಗಾಳಿಯ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ವರದಿಯಾಗಿದೆ.

ತಾಪಮಾನದ ವಿವರ: ಐದರಿಂದ ಆರು ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು ಗಮನಾರ್ಹವಾಗಿ ಬದಲಾಗುವುದಿಲ್ಲ. ಪೂರ್ವ ಉತ್ತರ ಪ್ರದೇಶವದಲ್ಲಿ ಮಾತ್ರ ಗಮನಾರ್ಹವಾಗಿ ಬದಲಾವಣೆಯಾಗಲಿದ್ದು, ಮುಂದಿನ 24 ಗಂಟೆಗಳಲ್ಲಿ ಈ ಭಾಗದಲ್ಲಿ 2-4°C ರಷ್ಟು ತಾಪಮಾದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ನಂತರ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ. ಪೂರ್ವ ಭಾರತದಲ್ಲಿ ಮುಂದಿನ 24 ಗಂಟೆಗಳವರೆಗೆ ಯಾವುದೇ ಬದಲಾವಣೆ ಕಂಡುಬರುವುದಿಲ್ಲ, ನಂತರ ಮುಂದಿನ ಎರಡು ದಿನಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ ಕುಸಿತ ಕಂಡುಬರಲಿದೆ. ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಭಾರತದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ ಕುಸಿತ ಕಂಡುಬರಲಿದ್ದು, ಮೊದಲ ಮೂರು ದಿನಗಳಲ್ಲಿ ಗುಜರಾತ್‌ನಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಐಎಂಡಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+