IMD Weather Forecast: ಮುಂದಿನ 4-5 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 4-5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕಳೆದ ಮೂರು ದಿನಗಳಿಂದ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಪಾದ ವಾತಾವರಣ ಮುಂದುವರೆದಿದೆ. ಆದರೆ, ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಸೋಮವಾರದ ಬಳಿಕ ಅದೇ ಆಡಿದ್ದೇ ಆಟ ಎಂಬಂತೆ ಮತ್ತೆ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಾದ್ಯಂತ ತಾಪಮಾನವು 3-5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

IMD Weather Forecast Heavy Rainfall Forecast in These states for Next 4-5 days from April 2

ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 16-18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಗಾಳಿಯ ವೇಗ ಗಂಟೆಗೆ 10-20 ಕಿ.ಮೀ ವೇಗದಲ್ಲಿ ಇತ್ತು. ಏಪ್ರಿಲ್ 5ರ ವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಾವುದೇ ಶಾಖದ ಅಲೆ ಇರುವುದಿಲ್ಲ ಎಂದು ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಇಂದು (ಏಪ್ರಿಲ್‌ 2) ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಗರಿಷ್ಠ ತಾಪಮಾನ 33-35 ಡಿಗ್ರಿ ಸೆಲ್ಸಿಯಸ್ ಮತ್ತು 34-36 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗಿದೆ. ಏಪ್ರಿಲ್ 3ರಂದು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, 38 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಏಪ್ರಿಲ್ 4 ಮತ್ತು 5ರಂದು ಇದೇ ರೀತಿಯ ವಾಗಾವರಣ ಇಲಿದ್ದು, ಗಾಳಿಯ ವೇಗವು ಗಂಟೆಗೆ 30- 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 4-5 ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಆಲಿಕಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ಸೋಮವಾರ ಬೆಳಗ್ಗೆ 6 ಗಂಟೆಗೆ ದೆಹಲಿಯ ಗಾಳಿಯ ಗುಣಮಟ್ಟ 130ರ ಎಕ್ಯೂಐನಲ್ಲಿ ಇತ್ತು ಎಂದು ವರದಿಯಾಗಿದೆ.

ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಕೆರೆ, ಕಟ್ಟೆಗಳು, ನದಿ, ಪ್ರಮುಖ ಜಲಾಶಯಗಳು ಭರ್ತಿಯಾದ ಹಿನ್ನೆಲೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ಬಾರಿ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಬಾರಿ ಏನೆಲ್ಲಾ ಅವಾಂತರಗಳಿ ಸಂಭವಿಸುತ್ತವೆಯೂ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈಗಾಗಲೇ ಬಿರುಬಿಸಿಲಿನಿಂದ ಜನರು ಬೇಸತ್ತಿದ್ದು, ಮಳೆ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+