IMD Weather Forecast: ಮುಂದಿನ ನಾಲ್ಕೈದು ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದೆಲ್ಲೆಡೆ ಮುಂಗಾರು ಆವರಿಸುತ್ತಿದ್ದು, ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 4-5 ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ 4-5 ದಿನಗಳಲ್ಲಿ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

IMD Weather Forecast Heavy rainfall forecast in These states for Next 4-5 days from May 30

ಮುಂದಿನ ನಾಲ್ಕೈದು ದಿನಗಳ ಕಾಲ ಮುಂಬೈ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ನವದೆಹಲಿ, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌, ಜೂನ್ 2ರ ವರೆಗೆ ರಾಜಸ್ಥಾನ ಮತ್ತು ಉತ್ತರ ಪ್ರದೇಶ, ಒಡಿಶಾ, ಮೇ 31ರಂದು ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಮುಂದಿನ 7 ದಿನಗಳಲ್ಲಿ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರದಲ್ಲಿ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈಗಾಗಗಲೇ ದಕ್ಷಿಣದಲ್ಲಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟ ಹಿನ್ನೆಲೆ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರದ ಹಲವೆಡೆ ಭಾರೀ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+