IMD Weather Forecast: ಚಂಡಮಾರುತದ ಪರಿಚಲನೆ: ಈ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 48 ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಲವೆಡೆ ಸಾಧಾರಣೆ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಮೋಂಥಾ ಚಂಡಮಾರುತ ಪರಿಣಾಮ ಹಲವು ರಾಜ್ಯಗಳಲ್ಲಿ ರಣಮಳೆ ಸುರಿದಿದೆ.

ಚಂಡಮಾರುತದ ಪರಿಚಲನೆ ಹಿನ್ನೆಲೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇಂದು (ನವೆಂಬರ್ 4) ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಈಶಾನ್ಯ ಅರೇಬಿಯನ್ ಸಮುದ್ರ, ಈಶಾನ್ಯ ಅಸ್ಸಾಂ, ಪೂರ್ವ ಬಾಂಗ್ಲಾದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಂಡಮಾರುತದ ಪ್ರಸರಣ ಇದ್ದು, ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಇದರ ಪರಿಣಾಮ ಹೆಚ್ಚಾಗಿ ಉತ್ತರ ಭಾರತದ ರಾಜ್ಯಗಳ ಮೇಲೆ ಬೀರಲಿದೆ ಅಂತಲೂ ಮುನ್ಸೂಚನೆ ನೀಡಿದೆ.
ನವೆಂಬರ್ 4ರ ಮಂಗಳವಾರ ಜಮ್ಮು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇದೇ ವೇಳೆ ಪಂಜಾಬ್ ಮತ್ತು ಹರಿಯಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪೂರ್ವ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ನವೆಂಬರ್ 4-5ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ & ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ನವೆಂಬರ್ 4 ಮತ್ತು 5ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ ಈಶಾನ್ಯ ಭಾರತದಲ್ಲಿ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ತಮಿಳುನಾಡು, ಕರಾವಳಿ ಆಂಧ್ರಪ್ರದೇಶದ ಯಾನಂ, ರಾಯಲಸೀಮಾದಲ್ಲಿ ಮಂಗಳವಾರ (ನವೆಂವರ್ 4) ಹಗುರದಿಂದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ತಾಪಮಾನ ಪ್ರಮಾಣ ಎಷ್ಟಿರಲಿದೆ?: ಮುಂದಿನ 48 ಗಂಟೆಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ. ಮುಂದಿನ 3 ದಿನಗಳಲ್ಲಿ ಪೂರ್ವ ಭಾರತದಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ನಂತರದ 3-4 ದಿನಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಆಗುವುದಿಲ್ಲ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ಹವಾಮಾನದ ವಿವರ: ಮುಂದಿನ ಐದು ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಬದಲಿಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ. ಇನ್ನು ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ 1-3°C ರಷ್ಟು ಇಳಿಕೆಯಾಗಿದೆ. ಆದರೆ, ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆಯಾಗಿಲ್ಲ. ಇಂದು (ನವೆಂಬರ್ 4) ಗರಿಷ್ಠ ತಾಪಮಾನವು 28-30 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಇದೀಗ ಬಹುತೇಕ ರಾಜ್ಯಗಳಲ್ಲಿ ಚಳಿ ಆವರಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.












Click it and Unblock the Notifications