IMD Weather Forecast: ಈ ಭಾಗಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇನ್ನೂ ಕೂಡ ದಟ್ಟ ಮಂಜಿನ ನಡುವೆ ಭೀಕರ ಚಳಿ ಮುಂದುವರೆದಿದೆ. ಇನ್ನೂ ಕೆಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂಬರುವ ಕೆಲವು ದಿನಗಳ ಕಾಲ ದೇಶದ ಹಲವೆಡೆ ಚಂಡಮಾರುತದ ಪರಿಚಲನೆ ಹಿನ್ನೆಲೆ ಮಳೆಯಾಗುವ ಸಾಧ್ಯತೆಯಿದೆ. ವಾಯುವ್ಯ ಭಾರತದ ಹಲವೆಡೆ, ಈಶಾನ್ಯ ಬಾಂಗ್ಲಾದೇಶ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy Rainfall Forecast in these states for Next 5 days from February 10

ಫೆಬ್ರವರಿ 10 ಮತ್ತು 11ರಂದು ಪಶ್ಚಿಮ ಹಿಮಾಲಯ ಪ್ರದೇಶ, ಫೆಬ್ರವರಿ 10 ರಿಂದ 15ರ ವರೆಗೆ ಅರುಣಾಚಲ ಪ್ರದೇಶ, ಫೆಬ್ರವರಿ 10 ರಿಂದ 14 ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಅಸ್ಸಾಂ, ಫೆಬ್ರವರಿ 10 ರಿಂದ 12 ರವರೆಗೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ದಟ್ಟ ಮಂಜು?: ಕಳೆದ 24 ಗಂಟೆಗಳಲ್ಲಿ ಸಿಕ್ಕಿಂ, ಮೇಘಾಲಯ ಮತ್ತು ದಕ್ಷಿಣ ಒಳನಾಡಿನ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿತ್ತು. ಭಾರತೋಯ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಫೆಬ್ರವರಿ 10 ಮತ್ತು 11ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮತ್ತು 10ರಂದು ದಕ್ಷಿಣ ಒಡಿಶಾದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಪಮಾನದ ಮುನ್ಸೂಚನೆ: ಮುಂದಿನ 3 ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ನಂತರ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಐಎಂಡಿ ತಿಳಿಸಿದೆ. ಇನ್ನು ಮುಂದಿನ 5 ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಕಂಡುಬರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಫೆಬ್ರವರಿ 10) ಬೆಳಗ್ಗೆ 6 ಗಂಟೆಗೆ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 256 ದಾಖಲಾಗಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಫೆಬ್ರವರಿ 11ರಿಂದ 14ರ ವರೆಗೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಇನ್ನು ಮಂಗಳವಾರದವರೆಗೆ ಬೆಚ್ಚಗಿನ ವಾತಾವರಣ ಇರಲಿದ್ದು, ತಾಪಮಾನವು 28°C ವರೆಗೆ ಏರಿಕೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಫೆಬ್ರವರಿ 11 ಮತ್ತು 12ರಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+