IMD Weather Forecast: ಈ ಭಾಗಗಳಲ್ಲಿ ಮುಂದಿನ 5 ದಿನ ರಣಭೀಕರ ಮಳೆ ಸುರಿಯುವ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳವರೆಗೆ ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಾಯುವ್ಯ, ಮಧ್ಯ, ಪೂರ್ವ ಮತ್ತು ಕರಾವಳಿ ಪ್ರದೇಶಗಳ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

IMD Weather Forecast Heavy rainfall forecast in These states for next 5 days from July 4

ಎಲ್ಲೆಲ್ಲಿ ಮಳೆ?: ರಾಷ್ಟ್ರ ರಾಜಧನಿ ನವದೆಹಲಿಯ ಹಲವು ಭಾಗಗಳಲ್ಲಿ ಜುಲೈ 4ರಿಂದ 6ರ ವರೆಗೂ ಗುಡುಗು ಸಹಿತ ಭಾರೀ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಈಗಾಗಲೇ ಇಲ್ಲಿನ ಬಹುತೇಕ ಭಾಗಗಳಲ್ಲಿ ಮಳೆಯಾದ ಹಿನ್ನೆಲೆ ಬಿಸಿಲಿನ ಬೇಗೆಗೆ ಬೆಂದಿದ್ದ ಜನರ ಮನ ತಣಿಸಿದಂತಾಗಿದೆ.

ವಾಯುವ್ಯ ಭಾರತದ ಹವಾಮಾನ: ಇಂದು (ಜುಲೈ 4) ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 5 ರಿಂದ 9ರ ವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹರಿಯಾಣದಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಜೊತೆಗೆ ಈ ಭಾಗಗಳಲ್ಲಿ ಗಂಟೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅದರಲ್ಲೂ ಇದೇ ವೇಳೆ ಉತ್ತರ ಪ್ರದೇಶ ಮತ್ತು ಜಮ್ಮು ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ ಎದುರಾದರೂ ಆಶ್ಚರ್ಯವಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 7ರ ವರೆಗೂ ಮಳೆ: ಜುಲೈ 4, ಜುಲೈ 6 ಮತ್ತು 7ರಂದು ದಕ್ಷಿಣದ ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ, ಗುಜರಾತ್‌ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಧ್ಯ ಮತ್ತು ಪೂರ್ವ ಭಾರತದ ಹವಾಮಾನ: ಜುಲೈ 4 ರಿಂದ 7ರ ವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಜುಲೈ 5ರ ವರೆಗೆ ಒಡಿಶಾ, ಜುಲೈ 6 ಮತ್ತು 7ರಂದು ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಜುಲೈ 9ರ ವರೆಗೆ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಶಾನ್ಯ ಭಾರತದ ಹವಾಮಾನ: ಇದೀಗ ಸದ್ಯ ಅಸ್ಸಾಂನಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಜುಲೈ 6ರಂದು ಮೇಘಾಲಯದಲ್ಲಿ ಕಂಡು ಕೇಳರಿಯದ ರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 9ರ ವರೆಗೆ ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದರಲ್ಲೂ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳು, ತೆಲಂಗಾಣ ಮತ್ತು ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಅದರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ, ಪ್ರವಾಹ ಪೀಡಿತ ವಲಯಗಳು ಮತ್ತು ಜಲಾನಯನ ಪ್ರದೇಶಗಳಲ್ಲಿನ ಜನರು ಜಾಗರೂಕರಾಗಿರಬೇಕೆಂದು ಅಧಿಕಾರಿಗಳಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+