IMD Weather Forecast: ಈ ಭಾಗಗಳಲ್ಲಿ ಮುಂದಿನ ಐದು ದಿನ ರಣಭೀಕರ ಮಳೆ ಮುನ್ಸೂಚನೆ: ತಾಪಮಾನದ ಬಗ್ಗೆ IMD ಎಚ್ಚರಿಕೆ ಏನು?
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಹಲವೆಡೆ ಧಾರಾಕಾರ ಮಳೆ ಆಗುತ್ತಿದೆ. ಹಾಗೆಯೇ ಮುಂದಿನ ಐದು ದಿನ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಶೀತಗಾಳಿಯ ನಡುವೆಯೂ ಮುಂದಿನ ಹಲವು ದಿನಗಳವರೆಗೂ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಇದೀಗ ಹಲವು ರಾಜ್ಯಗಳಲ್ಲಿ ಚಳಿ ನಡುವೆಯೂ ರಣಭೀಕರ ಮಳೆ ಮುಂದುವರೆದಿದೆ.

ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಗುಡುಗು ಸಹಿತ ಮಳೆ ಮುಂದುವರೆಯಲಿದೆ. ಮತ್ತೊಂದೆಡೆ ಉತ್ತರ ಭಾರತದ ರಾಜ್ಯಗಳಲ್ಲಿ ತೀವ್ರವಾದ ಶೀತಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಈಗಾಗಲೇ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ತಾಪಮಾನ ದಿನದಿದಿಂದ ದಿನಕ್ಕೆ ಕುಸಿಯುತ್ತಲೇ ಇದ್ದು, ಶೀತಗಾಳಿ ಬೀಸುತ್ತಿದೆ. ಈ ನಡುವೆಯೂ ದಕ್ಷಿಣದಲ್ಲಿ ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳ ಹಲವೆಡೆ ನಿರಂತರವಾಗಿ ಮಳೆರಾಯನ ಆರ್ಭಸುತ್ತಲಿದ್ದಾನೆ. ಮುಂದಿನ ಹಲವು ದಿನಗಳವರೆಗೂ ಈ ಭಾಗದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಐಎಂಡಿ ಎಚ್ಚರಿಕೆ ನೀಡಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ನವೆಂಬರ್ 18ರ ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಹೆಚ್ಚಿನ ಭಾಗಗಳಲ್ಲಿ ಶೀತದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ತಾಪಮಾನದಲ್ಲಿ ತೀವ್ರ ಇಳಿಕೆ ಕಾಣಲಿದ್ದು, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ದಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಉತ್ತರ ಪ್ರದೇಶದ ಹೆಚ್ಚಿನ ಜಿಲ್ಲೆಗಳಲ್ಲಿ ಶೀತಗಾಳಿ ತೀವ್ರಗೊಂಡಿದ್ದು, ಅದರಲ್ಲೂ ಪ್ರಯಾಗ್‌ರಾಜ್‌ನಲ್ಲಿ ಹೆಚ್ಚು ಚಳಿ ಇರಲಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇದೇ ರೀತಿಯ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ. ಹಗಲಿನ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಆದರೆ, ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಇನ್ನೂ ನಿನ್ನೆ (ನವೆಂಬರ್ 17) ಲಕ್ನೋದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ತಾಪಮಾನದ ದಾಖಲಾದ ಬಗ್ಗೆ ವರದಿಯಾಗಿದೆ.
ಇಂದು ನವೆಂಬರ್ 18 ಮಂಗಳವಾರ ಬಿಹಾರದಲ್ಲಿ ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಬೆಳಗ್ಗೆ ಚಳಿಗಾಳಿ ವಾತಾವರಣ ಇದ್ದು, ಸಂಜೆಯೂ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಭಾಗದಲ್ಲಿ ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆ ಹೆಚ್ಚಿದೆ ಅಂತಲೂ ತಿಳಿಸಿದೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಹಿಮಾಲಯ ಪ್ರದೇಶದಾದ್ಯಂತ ಹಿಮಪಾತ ಮುಂದುವರಿಯುವ ಸಾಧ್ಯತೆಯಿದೆ. ಇಂದು (ನವೆಂಬರ್ 18) ಈ ಪ್ರದೇಶಗಳಲ್ಲಿ ತಾಪಮಾನವು 4-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನ ಮುನ್ಸೂಚನೆ: ದಕ್ಷಿಣ ಭಾರತದಾದ್ಯಂತ ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳವರೆಗೂ ಈ ಭಾಗಗಳ ಅನೇಕ ಪ್ರದೇಶಗಳ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ನವೆಂಬರ್ 18ರಿಂದ 23ರ ವರೆಗೆ ತಮಿಳುನಾಡು, ಕೇರಳ ಮತ್ತು ಮಾಹೆ, ನೆವಂಬರ್ 18ರಂದು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗಗಳಲ್ಲಿ ನವೆಂಬರ್ 22ರ ವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications