IMD Weather Forecast: ಈ ಭಾಗಗಳಲ್ಲಿ ಮುಂದಿನ 7 ದಿನ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ರಣಭೀಕರ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಜುಲೈ 5ರ ಶನಿವಾರ ದೇಶದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಛತ್ತೀಸ್‌ಗಢ, ಕರಾವಳಿ ಕರ್ನಾಟಕ, ಪೂರ್ವ ರಾಜಸ್ಥಾನ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ರಾಷ್ಟ್ರ ರಾಜಧಾನಿ ನವದೆಹಲಿ-ಎಸಿಆರ್ ಭಾಗಗಳಿಗೆ ಇಂದು ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಜುಲೈ 9ರ ವರೆಗೆ ಮುಂದಿನ ಹಲವು ದಿನಗಳ ಕಾಲ ದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಜುಲೈ 10ರ ವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ, ಜುಲೈ 7ರ ವರೆಗೆ ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾ, ಜುಲೈ 7ರಿಂದ 9ರ ವರೆಗೆ ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜುಲೈ 6ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 10ರ ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ, ಜುಲೈ 9ರ ವರೆಗೆ ಹರಿಯಾಣ, ಚಂಡೀಗಢ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಜುಲೈ 6 ಮತ್ತು 7ರಂದು ಪಂಜಾಬ್, ಜುಲೈ 6ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಪಶ್ಚಿಮ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 6 ಮತ್ತು 7ರಂದು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಏಳು ದಿನಗಳ ಕಾಲ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನ ಘಾಟ್ ಪ್ರದೇಶಗಳಲ್ಲಿ, ಜುಲೈ 8ರವರೆಗೆ ಸೌರಾಷ್ಟ್ರ ಮತ್ತು ಕಚ್, ಜುಲೈ 6 ಮತ್ತು 7ರಂದು ಮಹರಾಷ್ಟ್ರದ ಮರಾಠವಾಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ದಕ್ಷಿಣದ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 5 ರಂದು ತಮಿಳುನಾಡು, ಜುಲೈ 5, 9 ಮತ್ತು 10ರಂದು ಕೇರಳ, ಜುಲೈ 5 ಮತ್ತು6 ರಂದು ಕರ್ನಾಟಕದ ದಕ್ಷಿಣ ಒಳನಾಡು, ಜುಲೈ 5 ರಿಂದ 10ರ ವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ಜುಲೈ 5 ಮತ್ತು 6ರಂದು ಕರಾವಳಿ ಕರ್ನಾಟಕದಾದ್ಯಂತ ಅತಿ ಹೆಚ್ಚು ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರರಿಗೆ ಪ್ರಮುಖ ಸೂಚನೆ: ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಜುಲೈ 5 ರಿಂದ ಜುಲೈ 9ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications