IMD Weather Forecast: ಶೀತಗಾಳಿ ನಡುವೆಯೂ ಈ ಭಾಗಗಳಲ್ಲಿ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಆವರಿಸಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈಗಾಗಲೇ ಉತ್ತರ ಭಾರತದಾದ್ಯಂತ ತೀವ್ರ ಶೀತಗಾಳಿ ಬೀಸುತ್ತಿದೆ. ಮತ್ತೊಂದೆಡೆ ದೆಹಲಿ-ಎನ್‌ಸಿಆರ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ತಾಪಮಾನ ದಿನದಿಂದ ಕುಸಿಯುತ್ತಲಿದ್ದು, ಶೀತಗಾಳಿ ಬೀಸುತ್ತಿದೆ. ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ರಣಮಳೆ ಸುರಿದು ಜನಜೀವನ ಅಸ್ತವಯಸ್ತವಾದ ಘಟನೆಗಳು ನಡೆದಿವೆ. ಇದೀಗ ಮತ್ತೆ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಶೀತಗಾಳಿ ಹೆಚ್ಚಳ: ಅಸ್ಸಾಂ ಮತ್ತು ಮೇಘಾಲಯ, ಈಶಾನ್ಯ ಭಾರತ, ಬಿಹಾರ, ಪೂರ್ವ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಮಂಜು ಕವಿದ ವಾತಾವರಣ ಜೊತೆ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಐಎಂಡಿ ಎಚ್ಚರಿಕೆ ನೀಡಿದೆ.
ಬಹುತೇಕ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದ್ದು, ಶೀತಗಾಳಿಯ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗೆಯೇ ರಾಜಸ್ಥಾನದ 16 ಜಿಲ್ಲೆಗಳು ಈಗಾಗಲೇ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನವನ್ನು ದಾಖಲಿಸಿವೆ. ಸಿಕಾರ್‌ನಲ್ಲಿ 7 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ. ಇನ್ನೂ ಶೀತಗಾಳಿ ದಿನದಿಂದ ದಿನಕ್ಕೆ ಹೆಚ್ಚಗುತ್ತಿರುವ ಪರಿಣಾಮ ಆರೋಗ್ಯ ಸಮಸ್ಯೆಗಳು ಕಂಡುಬರುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯ ಎಂದು ಸಮಹೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ ವಿವರ: ಕಳೆದ 24 ಗಂಟೆಗಳಲ್ಲಿ ಕೇರಳ ಮತ್ತು ತಮಿಳುನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಕಡೆ ಭಾರೀ ಮಳೆಯಾಗಿದೆ. ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ಲಕ್ಷದ್ವೀಪ ಹಾಗೂ ಕರ್ನಾಟಕದ ದಕ್ಷಿಣ ಕರಾವಳಿಯಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗಿದೆ ಎಂದು ವರದಿಯಾಗಿದೆ.
ಹಾಗೆಯೇ ಮುಂದಿನ ಒಂದು ವಾರ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನೂ ಮುಂದಿನ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಕರಾವಳಿ ಕರ್ನಾಟಕದಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಅಂತಲೂ ತಿಳಿಸಿದೆ.
ಇನ್ನೂ ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಗಳಲ್ಲಿ ಚಳಿಯ ವಾತಾವರಣ ಇರಲಿದೆ. ಅಲ್ಲದೆ, ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಮಂಜು ಕವಿದಿರುವ ಸಾಧ್ಯತೆಯಿದೆ. ಮತ್ತೊಂದೆಡೆ ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳಿಕ ಮುಂದಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾನ ಹೆಚ್ಚಾಗಲಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications