IMD Weather Forecast: ಈ ಭಾಗಗಳಲ್ಲಿ ಮುಂದಿನ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ

IMD Weather Forecast: ದೇಶದ ಹಲವಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಚಳಿಯ ನಡುವೆಯೂ ಭಾರೀ ಮಳೆ ಮುಂದುವರೆದಿದೆ.

IMD Weather Forecast Heavy Rainfall Forecast In These States For Next 7 Days from November 8

ನವದೆಹಲಿ, ಪಂಜಾಬ್, ಉತ್ತರ ಪ್ರದೇಶ, ಬಿಹಾರ ಮತ್ತು ಹರಿಯಾಣ ಸೇರಿದಂತೆ ಹಲವಾರು ಉತ್ತರದ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಒಂದು ವಾರ ಪಶ್ಚಿಮ ಮತ್ತು ದಕ್ಷಿಣ ರಾಜ್ಯಗಳಲ್ಲಿ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಅದರಲ್ಲೂ ಇದೇ ವೇಳೆ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮುಂಬರುವ ದಿನಗಳಲ್ಲಿ ಗುಡ್ಡಗಾಡು ರಾಜ್ಯಗಳ ಹಲವಾರು ಪ್ರದೇಶಗಳಲ್ಲಿ ಹಿಮಪಾತ ಮತ್ತು ಲಘು ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆಯಿಂದ ಇರಬೇಕು. ಅಲ್ಲದೆ, ಈ ಭಾಗಗಳಿಗೆ ಪ್ರವಾಸ ಕೈಗೊಳ್ಳುವುದನ್ನು ಸ್ವಲ್ಪ ದಿನ ನಿಲ್ಲಿಸುವುದು ಉತ್ತಮ ಅಂತಲೂ ತಿಳಿಸಿದೆ.

ಇಂದು (ನವೆಂಬರ್ 8) ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತುಂಬಾ ಕಳಪೆಯಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೈಗಾರಿಕಾ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ಹೆಚ್ಚು ಕಳಪೆಯಿಂದ ಕೂಡಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಜೊತೆಗೆ ಮುಂಬರುವ ದಿನಗಳಲ್ಲಿ ದೆಹಲಿಯಲ್ಲಿ ತಾಪಮಾನ ಗಮನಾರ್ಹವಾಗಿ ಕುಸಿಯುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವನ್ನು 28 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದರೂ, ಕನಿಷ್ಠ ತಾಪಮಾನವು ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಗಿ ಉಳಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಕೇರಳ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ಹಲವಾರು ದಕ್ಷಿಣ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ನಿರಂತರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಲ್ಲುವುದು ಮತ್ತು ವಿದ್ಯುತ್ ಕಡಿತದಂತಹ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯೂ ಇದೆ ಅಂತಲೂ ಎಚ್ಚರಿಕೆ ನೀಡಿದೆ.

ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆ ಮೀನುಗಾರರು ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಐಎಂಡಿ ಸೂಚಿಸಿದೆ. ಇನ್ನೂ ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+