IMD Weather Forecast: ಈ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗುತ್ತಲಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಫೆಬ್ರವರಿ ತಿಂಗಳ ಅಂತ್ಯದವರೆಗೂ ದೇಶದ ಹಲವೆಡೆ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ. ಹಲವು ರಾಜ್ಯಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ವಾತಾವರಣ ತಂಪಾಗಿರಲಿದ್ದು, ಮಧ್ಯಾಹ್ನದ ವೇಳೆಗೆ ತಾಪಮಾನದಲ್ಲಿ ಏರಿಕೆಯಾಗಿದೆ. ಇನ್ನೂ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy rainfall forecast in these states for Next Five days from February 23

ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಒಡಿಶಾ, ಸಿಕ್ಕಿಂ ಹಾಗೂ ಎಲ್ಲಾ ಈಶಾನ್ಯ ರಾಜ್ಯಗಳಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಇನ್ನು ಹವಾಮಾನ ಇಲಾಖೆ ಪ್ರಕಾರ, ಫೆಬ್ರವರಿ 23ರಿಂದ 26ರ ವರೆಗೆ ನವದೆಹಲಿಯ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನವು 27ರಿಂದ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನದಲ್ಲಿ 9 ರಿಂದ 15 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ. ಈ ನಡುವೆಯೂ ಫೆಬ್ರವರಿ 27ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಮುಂದಿನ 5 ದಿನಗಳವರೆಗೂ ತಾಪಮಾನದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ವಾರಣಾಸಿಯಲ್ಲಿ ತಾಪಮಾನ ಈಗಾಗಲೇ 33 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನು ಫೆಬ್ರವರಿ 27ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಬ್ರವರಿ 25ರಿಂದ 28ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಲೇ ರಾಜಸ್ಥಾನದ ಹಲವೆಡೆ ಕಳೆದ 24 ಗಂಟೆಗಳಲ್ಲಿ ಮಳೆಯಾಗಿದೆ. ಹನುಮಾನ್‌ಗಢ ಜಿಲ್ಲೆಯ ಸಂಗಾರಿಯಾ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಿದೆ. ಇದೀಗ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ ಎಂದು ತಿಳಿಸಿದೆ.

ಫೆಬ್ರವರಿ 24 ರಂದು ಹರಿಯಾಣ ಮತ್ತು ಪಂಜಾಬ್‌ನಲ್ಲಿ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 25ರಿಂದ 26ರವರೆಗೆ ಈ ಭಾಗದಲ್ಲಿ ತಾಪಮಾನದಲ್ಲಿ ಇಳಿಕೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕಳೆದ ಬಾರಿ ಸಂದರೆ 2024ರ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಕೆಲವೆಡೆ ಪ್ರವಾಹ ಬಂದು ಗುಡ್ಡ ಕುಸಿತ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಅಲ್ಲದೆ, ಮತ್ತೊಂದೆಡೆ ಪ್ರಮುಖ ಜಲಾಶಯಗಳು ತುಂಬಿದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿತ್ತು. ಇದೀಗ ಈ ವರ್ಷವೂ ಸಹ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+