IMD Weather Forecast: ಈ ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ಭಾಗಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಹೆಚ್ಚಾಗುತ್ತಲ ಇದೆ. ಇನ್ನೂ ಕಲವೆಡೆ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಚಂಡಮಾರುತದ ಪರಿಚಲನೆ ಪರಿಣಾಮ ದೇಶದ ಹಲವೆಡೆ ಮುಂಬರುವ ದಿನಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚಚನೆ ನೀಡಿದೆ. ಉತ್ತರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಲೆಗಳು ಆಂಧ್ರಪ್ರದೇಶದ ರಾಯಲಸೀಮಾದಿಂದ ದಕ್ಷಿಣ ಛತ್ತೀಸ್‌ಗಢದವರೆಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಬ್ರವರಿ 22 ಮತ್ತು 23ರಂದು ಒಡಿಶಾದಲ್ಲಿ ಗಂಟೆಗೆ 40 ರಿಂದ 60 ಕಿಲೋ ಮೀಟರ್ ಗಾಳಿ ಬೀಸಲಿದ್ದು, ಜೊತೆಗೆ ಈ ಭಾಗದಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್, ಸಿಕ್ಕಿಂ ಮತ್ತು ಬಿಹಾರದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಈ ಮಧ್ಯೆಯೇ ಫೆಬ್ರವರಿ 25 ಮತ್ತು 26ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಫೆಬ್ರವರಿ 25, 26 ಮತ್ತು 27ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 27ರಂದು ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನ, ಫೆಬ್ರವರಿ 22ರಂದು ಕರ್ನಾಟಕದ ಹಲವೆಡೆ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ರಾಯಲಸೀಮಾದಲ್ಲಿ ಮತ್ತು ಮುಂದಿನ 7 ದಿನಗಳಲ್ಲಿ ಕೇರಳದ ಹಲವರೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಚಂಡಮಾರುತದ ಪರಿಚಲನೆ: ನಾಗಾಲ್ಯಾಂಡ್‌ನಲ್ಲಿ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆಯಾಗುತ್ತಲೇ ಇದೆ. ಇದರ ನಡುವೆಯೇ ಈ ಭಾಗದಲ್ಲಿ ಚಂಡಮಾರುತದ ಪ್ರಭಾವ ಬೀರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳಲ್ಲಿ ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 23ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಟ್ಟ ಮಂಜು: ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಬೆಳಗ್ಗೆ ಮತ್ತು ಸಂಜೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಬ್ರವರಿ 24ರವರೆಗೆ ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಇದೇ ವೇಳೆ ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಪೂರ್ವ ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿಯೂ ಬೆಳಗ್ಗೆ ವೇಳೆ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.












Click it and Unblock the Notifications