IMD Weather Forecast: ಜೂನ್‌ 7ರ ವರೆಗೂ ರಣಭೀಕರ ಮಳೆ ಮುನ್ಸೂಚನೆ

India Weather Forecast: ಅವಧಿಗೂ ಮುನ್ನ ಮುಂಗಾರು ಎಂಟ್ರಿ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾದ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ಭಾರತ ಹವಾಮಾನ ಇಲಾಖೆಯ ಪ್ರಕಾರ, ಮುಂಗಾರು ಹಾಗೂ ಚಂಡಮಾರುತ ಸೃಷ್ಟಿ ಪರಿಣಾಮ ಕೆಲವು ದಿನಗಳವರೆಗೆ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾದರೆ, ಇನ್ನೂ ಕೆಲವು ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

IMD Weather Forecast Heavy rainfall forecast in These states for Next one week from May 31

ಒಂದು ವಾರ ಮಳೆ: ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಇದು ಉತ್ತರ ಭಾರತದ ಕಡೆಗೆ ಸಾಗುತ್ತಿದೆ. ಪರಿಣಾಮ ಈ ಭಾಗದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನ ಮೇಘಾಲಯ, ಅಸ್ಸಾಂ, ತ್ರಿಪುರ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅದರಲ್ಲೂ ಇಂದು (ಮೇ 31) ಮೇಘಾಲಯದಲ್ಲಿ 30 ಸೆಂ.ಮೀ. ಮಳೆಯಾಗುವ ಮುನ್ಸೂಚನೆ ಇದ್ದು, ಗುಡ್ಡಗಾಡು ಪ್ರದೇಶಗಳಲ್ಲಿನ ಭೂಕುಸಿತ ಸಂಭವಿಸುವ ಆತಂಕ ಎದುರಾಗಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮುಂದಿನ ಎರಡು ದಿನ ದಕ್ಷಿಣ ಭಾರತದ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಇಂದು (ಮೇ 31) ನವದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ವ್ಯಾಪಕವಾಗಿ ಮಳೆಯಾಗುವ ಗುಡುಗು ಸಹಿತ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 70 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮತ್ತೊಂದೆಡೆ ಪಶ್ಚಿಮ ರಾಜಸ್ಥಾನದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆ ವಿಮಾನಯಾನ ಹಾರಾಟಕ್ಕೆ ಅಡ್ಡಿಯುಂಟುವ ಮಾಡುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 31 ಮತ್ತು ಜೂನ್‌ 1ರಂದು ಬಿಹಾರ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 70 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದ್ದು, ಈ ಭಾಗಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಇದೇ ವೇಳೆ ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗೋವಾ ಮತ್ತು ಕರಾವಳಿ ಮಹಾರಾಷ್ಟ್ರದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದ ಈ ಪ್ರದೇಶಗಳಲ್ಲಿನ ತಾಪಮಾನ ಪ್ರಮಾಣ ತಗ್ಗಲಿದ್ದು, ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ನೆಮ್ಮದಿ ಸಿಕ್ಕಂತಾಗಲಿದೆ.

ಮೇ 31 ರಿಂದ ಜೂನ್ 2 ರವರೆಗೆ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಜೊತೆಗೆ ಗಂಟೆಗೆ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+