IMD Weather Forecast: ಈ ಭಾಗಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ದೇಶದ ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಮುಂದಿನ ಹಲವು ದಿನಗಳ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ ಎನ್‌ಸಿಆರ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಬಿರುಗಾಳಿ ಮಳೆಯಾಗಿದೆ. ಪರಿಣಾಮ ಸುಮಾರು ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಮತ್ತೊಂದೆಡೆ ಭಾರೀ ಮಳೆಯಿಂದಾಗಿ ಈ ರಾಜ್ಯಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ತಂಪೆರೆದಂತಾಗಿದೆ. ಅಲ್ಲದೆ, ಮುಂದಿನ ಕೆಲವು ದಿನಗಳ ಕಾಲ ಈ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇಂದು ಅಂದರೆ ಶನಿವಾರ ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳು ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿ ಬಲವಾದ ಗಾಳಿ ಬೀಸಲಿದ್ದು, ಜೊತೆಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅಷ್ಟೇ ಅಲ್ಲದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲ ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ದೆಹಲಿಯ ಹಲವೆಡೆ ನೀರು ನಿಂತು ನಾಲ್ವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಮುಂದಿನ ಕೆಲವು ದಿನಗಳವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಉತ್ತರ ಪ್ರದೇಶದಲ್ಲೂ ಸಹ ಭಾರೀ ಮಳೆ ಮುಮದುವರೆದಿದೆ. ಈ ವಾತಾವರಣ ಮುಂದಿನ ಹಲವು ದಿನಗಳ ಕಾಲ ಇರಲಿದೆ. ಅಲ್ಲದೆ, ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆ ಆಗಲಿದೆ ಎಂದು ಎಚ್ಚರಿಕೆ ಸಂದೇಶವನ್ನ ರವಾನಿಸಿದೆ. ಈಗಾಗಲೇ ಭಾರೀ ಮಳೆಯಿಂದ ಈ ಭಾಗದಲ್ಲಿ ಸಣ್ಣಪುಟ್ಟ ಹಾನಿಯಾಗಿವೆ ಎಂದು ತಿಳಿದುಬಂದಿದೆ.
ರಾಂಚಿ ಸೇರಿದಂತೆ ಜಾರ್ಖಂಡ್‌ನ ಹಲವಾರು ಜಿಲ್ಲೆಗಳಲ್ಲಿ ಮೇ 4ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಾಪಮಾನ ಪ್ರಮಾಣವು ಸಹ ಕಡಿಮೆಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications