IMD Weather Forecast: ಎಚ್ಚರ.. ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶಾದ್ಯಂತ ಮುಂಗಾರು ಆವರಿಸಿದ್ದು, ಹಲವು ರಾಜ್ಯಗಳಲ್ಲಿ ರಣಭೀಕರ ಮಳೆ ಮುಂದುವರೆದಿದೆ. ಹಾಗೆಯೇ ಇದೀಗ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮುಂಬರುವ ಕೆಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

IMD Weather Forecast Heavy Rainfall Forecast in these states in Coming Days

ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಗುಡ್ಡಗಾಡು ಪ್ರದೇಶಗಳಂತಹ ರಾಜ್ಯಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ರಣಬಿಸಿಲಿನಿಂದ ಮುಕ್ತಿ ಸಿಕ್ಕಂತಾಗಲಿದೆ. ಜೊತೆಗೆ ಗಂಟೆಗೆ 50-60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಭಾರೀ ಮಳೆಯಾಗುವಂತಹ ಮುನ್ಸೂಚನೆ ಇರುವ ಪ್ರದೇಶಗಳಲ್ಲಿನ ನಿವಾಸಿಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ತಮ್ಮ ಪ್ರವಾಸಗಳನ್ನು ಮುಂದೂಡುವಂತೆಯೂ ಸೂಚನೆ ನೀಡಿದೆ.

ಮುಂಬರುವ ಹಲವು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಇದರಿಂದ ಇಲ್ಲಿನ ಜನರಿಗೆ ಬಿರು ಬಿಸಿಲಿನಿಂದ ಮುಕ್ತಿ ಸಿಕ್ಕಂತಾಗಲಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದ ಇಲ್ಲಿನ ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ತಿಳಿದುಬಂದಿದೆ.

ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್ ಹೊರತುಪಡಿಸಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವು ಉತ್ತರ ಭಾರತ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 17ರ ವರೆಗೆ ದೇಶದ ಪಶ್ಚಿಮ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿದಂತೆ ಇಲ್ಲಿನ ಇತರ ನಗರಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ರಾಜ್ಯಗಳಲ್ಲಿ ಎಲ್ಲೆಲ್ಲಿ ಮಳೆ?: ಮುಂದಿನ ಕೆಲವು ದಿನಗಳವರೆಗೆ ಕೇರಳ, ಕರ್ನಾಟಕದ ಹಲವು ಭಾಗಗಳಲ್ಲಿ ಮತ್ತು ತಮಿಳುನಾಡು ಸೇರಿದಂತೆ ಹಲವು ದಕ್ಷಿಣದ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ನದಿ, ಜಲಪಾತಗಳು, ಜಲಾಶಯಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೆ, ದೊಡ್ಡ ದೊಡ್ಡ ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಎಷ್ಟೋ ಜನ ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದ ಉದಾಹರಣೆಗಳಿವೆ. ಇನ್ನೂ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆ ಏನೆಲ್ಲಾ ಅನಾಹುತಗಳು ಕಾದಿದೆವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+