IMD Weather Forecast: ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಅಬ್ಬರದ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆ ಆಗುತ್ತಿದೆ. ಹಾಗೆಯೇ ಇಂದು (ಮೇ 2) ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎಂದು ಇಲ್ಲಿ ತಿಳಿಯಿರಿ.

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಲವು ಭಾಗಗಳಲ್ಲಿ ಇಂದು ಅಂದರೆ ಶುಕ್ರವಾರ ಮುಂಜಾನೆ ಗುಡುಗು ಸಹಿತ ಬಿರುಗಾಳಿ ಮಳೆಯಾಗಿದೆ. ಇದರಿಂದ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಸಂತಸ ತಂದಂತಾಗಿದೆ. ಅಲ್ಲದೆ, ಕೆಲವೇ ಗಂಟೆಗಳಲ್ಲಿ ಮಳೆ ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆಯಿದೆ ಮತ್ತು ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಸಹ ಘೋಷಿಸಿದೆ.

IMD Weather Forecast Heavy rainfall Forecast in these States in few hours on May 1

ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ. ಬೆಳಗ್ಗೆ 5:30 ರಿಂದ 5:50ರ ವರೆಗೆ ಮಳೆಯಾಗಿದೆ. ಅಲ್ಲದೆ, ಗಂಟೆಗೆ 78 ಕಿ.ಮೀ ವೇಗದಲ್ಲಿ ಗಾಳಿ ಬೀಸಿರುವ ಬಗ್ಗೆ ವರದಿಯಾಗಿದೆ. ಇಗ್ನೌ (52 ಕಿ.ಮೀ), ನಜಾಫ್‌ಗಢ (56 ಕಿ.ಮೀ), ಲೋಧಿ ರಸ್ತೆ (59 ಕಿ.ಮೀ) ಮತ್ತು ಪಿತಂಪುರದಲ್ಲಿ ಗಂಟೆಗೆ 59 ಕಿ.ಮೀ ವೇಗದಲ್ಲಿ ಗಾಳಿ ಬೀಸಿದೆ ಎಂದು ತಿಳಿದುಬಂದಿದೆ.

ಭಾರೀ ಮಳೆ ಗಾಳಿ ಪರಿಣಾಮ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ಅಡೆತಡೆ ಉಂಟಾಗಿದೆ. ಆದ್ದರಿಂದ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಟ್ವೀಟ್‌ ಖಾತೆ ಮೂಲಕ ನೀಡಿದ ಸಲಹೆಯ ಪ್ರಕಾರ, ಪ್ರತಿಕೂಲ ಹವಾಮಾನದಿಂದಾಗಿ ಕೆಲವು ವಿಮಾನಗಳು ವಿಳಂಬವಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವಂತೆ ಸೂಚಿಸಿದೆ.

ಮುಂದಿನ ಕೆಲವು ದಿನಗಳವರೆಗೆ ತಾಪಮಾನವು 40°Cಗಿಂತ ಕಡಿಮೆಯಾಗಲಿದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಭಾಗದ ನಿವಾಸಿಗಳು ಹೊರಗಡೆ ಮನೆಯೊಳಗೆ ಇರುವಂತೆ, ಪ್ರಯಾಣವನ್ನು ತಪ್ಪಿಸುವಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನವದೆಹಲಿ ಅಷ್ಟೇ ಅಲ್ಲದೆ ದೇಶದ ಹಲವು ಭಾಗಗಳಲ್ಲಿ ಮಳೆಯಾಗಲಿ ಎಂದು ಮುನ್ಸೂಚನೆ ನೀಡಿದೆ. ಉತ್ತರ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ನೈಋತ್ಯ ರಾಜಸ್ಥಾನ, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿದ್ದವು. ಹಾಗೆಯೇ ಈ ಬಾರಿ ಅಂದರೆ 2025ರಲ್ಲೂ ಕೂಡ ಮುಂಗಾರು ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಈ ಬಾರಿ ಏನು ಕಾದೈತೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಕಳೆದ ಬಾರಿ ಮೊದಲು ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಬಳಿಕ ಎಲ್ಲಾ ರಾಜ್ಯಗಳಿಗೂ ಆವರಿಸಿಬಿಟ್ಟಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+