IMD Weather Forecast: ಈ ಭಾಗಗಳಲ್ಲಿ ಕೆಲವೇ ಕ್ಷಣಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗದಲ್ಲಿ ಇಂದು (ಮೇ 5) ಕೆಲವೇ ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಹವಾಮಾನ ಇಲಾಖೆ ಪ್ರಕಾರ, ಸೋಮವಾರ ಕೆಲವೇ ಕ್ಷಣಗಳಲ್ಲಿ ದೇಶದ ಹಲವೆಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಒಡಿಶಾ, ಪಶ್ಚಿಮ ಬಂಗಾಳ, ದೆಹಲಿ-ಎನ್‌ಸಿಆರ್‌ನಲ್ಲಿ ಭಾರೀ ಮಳೆ ಜೊತೆಗೆ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಹಿನ್ನೆಲೆ ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ಭಾರೀ ಮಳೆ ಹಿನ್ನೆಲೆ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಬಿಹಾರ, ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಿದೆ.
ಮಹಾರಾಷ್ಟ್ರದಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಥಾಣೆ, ಪಾಲ್ಘರ್, ಪುಣೆ, ನಾಸಿಕ್, ಜಲಗಾಂವ್, ಸತಾರಾ ಮತ್ತು ಮರಾಠವಾಡದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ಮುಂಬೈನಲ್ಲಿಯೂ ಸಹ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಕರ್ನಾಟಕದಲ್ಲಿ ಎಲ್ಲೆಲ್ಲಿ ಎಲ್ಲಿವರೆಗೂ ಮಳೆ?: ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಹಲಿದ ಎನ್ನುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ,ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಗಳಲ್ಲಿ ಒಂದು ವಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ.
ಈಗಾಗಲೇ ಕಳೆದ ಬಾರಿ ಅಂದರೆ, 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಉತ್ತರ ಭಾರತ ಸೇರಿದಂತೆ ದಕ್ಷಿಣ ಭಾರತದ ಕೇರಣದಲ್ಲಿ ಪ್ರವಾಹದಂತಹ ವಾತಾವರಣ ನಿರ್ಮಾಣವಾಗಿ ಅಪಾರ ಜೀವಹಾನಿಗಳು ಸಂಭವಸಿದ್ದವು. ಮತ್ತೊಂದೆಡೆ ಕೆರೆ, ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿದ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ಬಾರಿ ಅಂದರೆ 2025ರಲ್ಲೂ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಇದರಿಂದ ಜನರು ಮುಂದೇನು ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ.












Click it and Unblock the Notifications