IMD Weather Forecast: ಏಪ್ರಿಲ್ 5 ಮತ್ತು 6ರಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಭಿಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಚಂಡಮಾರುತದ ಪರಿಚಲನೆ ಹಿನ್ನೆಲೆ ಮುಂದಿನ ಹಲವು ದಿನಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಧ್ಯಪ್ರದೇಶ, ದಕ್ಷಿಣ ಅಂಡಮಾನ್ ಮೇಲೆ ಇಂದು (ಏಪ್ರಿಲ್ 5) ಚಂಡಮಾರುತದ ಪ್ರಭಾವ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 5 ಮತ್ತು 6ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಏಪ್ರಿಲ್ 5ರಂದು ಮಹಾರಾಷ್ಟ್ರದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಏಪ್ರಿಲ್ 5ರಂದು ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು, ಅಸ್ಸಾಂ ಮೇಘಾಲಯ ಮತ್ತು ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 6ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಅಲ್ಲಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಏಪ್ರಿಲ್ 5 ಮತ್ತು 6ರಂದು ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಮುಂದಿನ 6 ದಿನಗಳಲ್ಲಿ ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಮತ್ತು ಮುಂದಿನ 7 ದಿನಗಳಲ್ಲಿ ಮಧ್ಯ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 2-4°C ರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರವು ಗರಿಷ್ಠ ತಾಪಮಾನದಲ್ಲಿ 3-4°Cರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ಗುಜರಾತ್‌ನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ. ನಂತರ ಮುಂದಿನ ನಾಲ್ಕು ದಿನಗಳಲ್ಲಿ ಈ ಭಾಗದಲ್ಲಿ 2-3°Cರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ನಂತರ ಮುಂದಿನ ಮೂರು ದಿನಗಳಲ್ಲಿ 2-4°Cರಷ್ಟು ಏರಿಕೆಯಾಗುವ ಸಾಧ್ಯತೆಯಿದ. ಅಲ್ಲದೆ, ಮುಂದಿನ ಏಳು ದಿನಗಳವರೆಗೆ ದೇಶದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 5 ರಿಂದ 9ರ ವರೆಗೆ ಸೌರಾಷ್ಟ್ರ, ಕಚ್, ದಕ್ಷಿಣ ಹರಿಯಾಣ, ದೆಹಲಿಯಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಸಿದೆ.
ಹಿಮಾಚಲ ಪ್ರದೇಶ ಏಪ್ರಿಲ್ 5 ರಿಂದ 7ರ ವರೆಗೆ, ಪಂಜಾಬ್ ಮತ್ತು ಗುಜರಾತ್ ಪ್ರದೇಶದಲ್ಲಿ ಏಪ್ರಿಲ್ 6ರಿಂದ 9ರವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಏಪ್ರಿಲ್ 5ರಿಂದ 10 ರವರೆಗೆ, ಗುಜರಾತ್ ಪ್ರದೇಶದಲ್ಲಿ ಏಪ್ರಿಲ್ 6ರಿಂದ 8 ರವರೆಗೆ, ಪೂರ್ವ ರಾಜಸ್ಥಾನದಲ್ಲಿ ಏಪ್ರಿಲ್ 6 ರಿಂದ 10 ರವರೆಗೆ, ಏಪ್ರಿಲ್ 7ರಿಂದ 10 ರವರೆಗೆ ಪಶ್ಚಿಮ ಮಧ್ಯಪ್ರದೇಶದಲ್ಲಿ, ಏಪ್ರಿಲ್ 5 ರಿಂದ 10ರವರೆಗೆ ಗುಜರಾತ್‌ನಲ್ಲಿ ಮತ್ತು ಕೊಂಕಣ ಮತ್ತು ಗೋವಾದಲ್ಲಿ ಏಪ್ರಿಲ್ 5 ರಿಂದ 9ರವರೆಗೆ ಬಿಸಿಗಾಳಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications