IMD Weather Forecast: ಚಂಡಮಾರುತದ ಪರಿಚಲನೆ ಹಿನ್ನೆಲೆ ಈ ಭಾಗಗಳಲ್ಲಿ ಫೆಬ್ರವರಿ 19, 20ರಂದು ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ಚಳಿಗಾಲ ಮುಗಿಯುತ್ತಾ ಬರುತ್ತಿದ್ದು, ಬೇಸಿಗೆ ಸನಿಹದಲ್ಲಿದೆ. ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮುಂದಿನ ಎರಡು ದಿನ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂಬರುವ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇಂದು (ಫೆಬ್ರವರಿ 19) ಬೆಳಗ್ಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚಳಿ ನಡುವೆಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಹಾಗೆಯೇ ಸಂಜೆ ವೇಳೆಗೆ ನವದೆಹಲಿ ಸೇರಿದಂತೆ ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

IMD Weather Forecast Heavy rainfall forecast in these states On February 19 20

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ದೇಶದ ಹಲವೆಡೆ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಈಶಾನ್ಯ ಅಸ್ಸಾಂನಲ್ಲಿ ಚಂಡಮಾರುತದ ಮೇಲೆ ಚಂಡಮಾರುತದ ಪ್ರಭಾವ ಹಿನ್ನೆಲೆ ಇಲ್ಲಿನ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೆ, ಚಂಡಮಾರುತದ ಪರಿಚಲನೆ ಹಿನ್ನೆಲೆ ಫೆಬ್ರವರಿ 19 ಮತ್ತು 20ರಂದು ಹಿಮಾಲಯ ಪ್ರದೇಶ ವಾಯುವ್ಯ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ನವೆಂಬರ್ 19) ದೆಹಲಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 13.05 ಡಿಗ್ರಿ ಸೆಲ್ಸಿಯಸ್ ಮತ್ತು 28.39 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಕಳೆದ ಮೂರು ದಿನಗಳಿಂದ ತೀವ್ರ ಕಳಪೆ ಆಗಿದ್ದು, ಇಂದು ಸ್ವಲ್ಪ ಮಟ್ಟಿಗೆ ಸುಧಾರಿಸಿದೆ ಎಂದು ಭಾರತೀಯ ಹವಾಮನ ಇಲಾಖೆಯಿಂದ ತಿಳಿದುಬಂದಿದೆ. ಇನ್ನೂ ಇದೀಗ ಚಳಿಗಾಲ ಮುಗಿಯಗ ಹಂತದಲ್ಲಿದ್ದು, ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಬಿರು ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಬೇಸಿಗೆ ಆರಂಭ ಆದ್ರೆ, ಇನ್ನೇನು ಗತಿ ಕಾದಿದೆಯೋ ಅಂತದ್ದಾರೆ ದೆಹಲಿಯ ಜನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+