IMD Weather Forecast: ಫೆಬ್ರವರಿ 26 ಮತ್ತು 27ರಂದು ಈ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನದ ಪ್ರಮಾಣ ಹೆಚ್ಚಾಗುತ್ತಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಫೆಬ್ರವರಿ 26 ಮತ್ತು 27ರಂದು ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಅಬ್ಬದರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದಾದ್ಯಂತ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪರಿಣಾಮ ಫೆಬ್ರವರಿ 26ರಂದು ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್‌ ಮತ್ತು ಫೆಬ್ರವರಿ 27ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

IMD Weather Forecast Heavy rainfall forecast in these states on February 26 and 27

ವಾಯುಭಾರ ಕುಸಿತದ ಬಳಿಕ ಹಿಮಾಚಲ ಪ್ರದೇಶದಲ್ಲಿ ಮಳೆಯ ಲಕ್ಷಣ ಕಂಡುಬಂದಿದೆ. ಫೆಬ್ರವರಿ 25ರ ಬೆಳಗ್ಗೆಯಿಂದ ಚಂಬಾ, ಕಾಂಗ್ರಾ, ಉನಾ, ಬಿಲಾಸ್ಪುರ್ ಮತ್ತು ಶಿಮ್ಲಾದಲ್ಲಿ ಮೋಡ ಕವಿದಿದ್ದು, ಶಿಮ್ಲಾ ಮತ್ತು ಬಿಲಾಸ್ಪುರ್‌ನಲ್ಲಿ ಈಗಾಗಲೇ ಮಳೆಯಾಗಿದೆ. ಇನ್ನು ಕುಫ್ರಿಯಲ್ಲಿ ಲಘು ಹಿಮಪಾತವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇಂದು (ಫೆಬ್ರವರಿ 26) ರಾತ್ರಿಯಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾಂಗ್ರಾ, ಮಂಡಿ, ಸೋಲನ್, ಶಿಮ್ಲಾ, ಸಿರ್ಮೌರ್, ಬಿಲಾಸ್ಪುರ್ ಮತ್ತು ಹಮೀರ್‌ಪುರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ಅದೇ ದಿನ ಕುಲ್ಲು, ಚಂಬಾ, ಕಾಂಗ್ರಾ ಮತ್ತು ಮಂಡಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಫೆಬ್ರವರಿ 27 ರಂದು ಚಂಬಾ, ಕಾಂಗ್ರಾ, ಕುಲ್ಲು ಮತ್ತು ಮಂಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಈ ಭಾಗಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ, ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಉನಾದಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು ಶಿಮ್ಲಾದಲ್ಲಿ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರ ನಡುವೆಯೂ ಮೋಡ ಕವಿದ ಹಿನ್ನೆಲೆ ಶಿಮ್ಲಾ, ಬಿಲಾಸ್ಪುರ್ ಮತ್ತು ಕಾಂಗ್ರಾದಲ್ಲಿ ಹಗಲಿನ ತಾಪಮಾನವು 2 ರಿಂದ 3 ಡಿಗ್ರಿಗಳಷ್ಟು ಕುಸಿತವಾಗಿದೆ ಎಂದು ತಿಳಿದುಬಂದಿದೆ. ಇನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಫೆಬ್ರವರಿ 28ರ ವರೆಗೆ ಕನಿಷ್ಠ ತಾಪಮಾನದಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ.

ಆದರೆ, ಹಿಮಾಚಲ ಪ್ರದೇಶದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ. ಭಾರೀ ಮಳೆ ಮತ್ತು ಹಿಮಪಾತದ ಮುನ್ಸೂಚನೆ ಇರುವ ಹಿನ್ನೆಲೆ ಫೆಬ್ರವರಿ 26 ಮತ್ತು 27ರಂದು ಮಂಡಿ, ಬಿಲಾಸ್ಪುರ್, ಕಾಂಗ್ರಾ, ಉನಾ ಮತ್ತು ಹಮೀರ್‌ಪುರದಂತಹ ಜಿಲ್ಲೆಗಳಲ್ಲಿ ಹಗಲಿನ ತಾಪಮಾನವು 3ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಈ ಬಾರಿ ಅವಧಿಗೂ ಮುನ್ನವೇ ಬಹುತೇಕ ರಾಜ್ಯಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಇನ್ನೂ ಈಗಾಗಲೇ ಕಳೆದ ವರ್ಷ ಅಂದರೆ 2024ರಲ್ಲಿ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಪ್ರಮುಖ ಜಲಾಶಯಗಳು ಭರ್ತಿಯಾದ ಹಿನ್ನೆಲೆ ರೈತರ ಮುಖದಲ್ಲಿ ಮಂದಾಹಾಸ ಮೂಡಿದಂತಾಗಿದೆ. ಈ ಬಾರಿ 2025ರಲ್ಲೂ ಕೂಡ ದೇಶಾದ್ಯಂತ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+